ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ: ಮಾಯಾವತಿ

Last Updated 15 ಜನವರಿ 2021, 5:56 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿ ನಡೆಸಿರುವ ಅವರು, 'ಮುಂಬರುವ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಎಸ್‌ಪಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ' ಎಂದು ಹೇಳಿದ್ದಾರೆ.

'ಕೇಂದ್ರ ಸರ್ಕಾರದ ಕೋವಿಡ್‌ ಲಸಿಕೆ ವಿತರಣೆ ಅಭಿಯಾನವನ್ನು ಬಿಎಸ್‌ಪಿ ಸ್ವಾಗತಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲರಿಗೂ ಲಸಿಕೆಯನ್ನು ಉಚಿತವಾಗಿ ನೀಡಬೇಕು' ಎಂದು ಮಾಯಾವತಿ ಮನವಿ ಮಾಡಿಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ, ಎಲ್ಲರಿಗೂ ಉಚಿತವಾಗಿ ಕೋವಿಡ್‌ ಲಸಿಕೆ ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಮಾಯಾವತಿ ಒತ್ತಾಯಿಸಿದ್ದಾರೆ.

2022ರಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT