ಶುಕ್ರವಾರ, ಅಕ್ಟೋಬರ್ 22, 2021
21 °C

ದಲಿತ ಯುವಕನ ಹತ್ಯೆ: ಕಾಂಗ್ರೆಸ್‌ ಮೌನವೇಕೆ?– ಮಾಯಾವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ರಾಜಸ್ಥಾನದ ಹನುಮಗಡದಲ್ಲಿ ದಲಿತ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಹತ್ಯೆ ಬಗ್ಗೆ ಕಾಂಗ್ರೆಸ್‌ ಮೌನ ವಹಿಸಿದ್ದೇಕೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಪ್ರಶ್ನಿಸಿದ್ದಾರೆ.

ಹತ್ಯೆಯನ್ನು ಖಂಡಿಸಿರುವ ಅವರು, ‘ರಾಜಸ್ಥಾನದ ಘಟನೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಏಕೆ ಮೌನವಾಗಿದೆ?’ ಎಂದು ಟ್ವೀಟ್‌ ಮಾಡಿದ್ದಾರೆ. ಪ್ರೇಮ ಪ್ರಕರಣವೊಂದರಲ್ಲಿ ದಲಿತ ಯುವಕನ ಮೇಲೆ ಅ.7ರಂದು ಗುಂಪೊಂದು ಹಲ್ಲೆ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದರು.

‘ಪಂಜಾಬ್‌, ಛತ್ತೀಸಗಡ ಮುಖ್ಯಮಂತ್ರಿಗಳು ಅಲ್ಲಿಗೂ ಭೇಟಿ ನೀಡಿ, ಸಂತ್ರಸ್ತ ಕುಟುಂಬಕ್ಕೆ  ₹50 ಲಕ್ಷ ಪರಿಹಾರ ನೀಡುವರೇ? ಇದಕ್ಕೆ ಉತ್ತರ ನೀಡಿ. ಇಲ್ಲದಿದ್ದರೆ ದಲಿತರ ಹೆಸರಿನಲ್ಲಿ ಮೊಸಳೆ ಕಣ್ಣೀರು ಹಾಕುವುದನ್ನು ಬಿಡಿ’ ಎಂದು ಕಿಡಿಕಾರಿದ್ದಾರೆ.

ಲಖಿಂಪುರ ಪ್ರಕರಣದ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಇದು ಬಿಜೆಪಿ ಸರ್ಕಾರದ ಕಾರ್ಯವಿಧಾನವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. ಸಚಿವ ಅಜಯ್‌ ಮಿಶ್ರಾ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿರುವ ಅವರು, ಆಗಷ್ಟೇ ರೈತರಿಗೆ ನ್ಯಾಯ ಸಿಗುವ ಭರವಸೆ ಇದೆ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು