ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌, ಬಿಎಸ್‌ಪಿಗೆ ಉತ್ತರ ಪ್ರದೇಶ ವಿಧಾನಭವನದಲ್ಲಿ ಕಚೇರಿಯೂ ಇಲ್ಲ

Last Updated 15 ಮಾರ್ಚ್ 2022, 4:54 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಥಾನ ಗಳಿಕೆಯಲ್ಲಿ ಹಿಂದೆಬಿದ್ದಿರುವ ಬಿಎಸ್‌ಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ವಿಧಾನ ಭವನದ ಸಂಕೀರ್ಣದಲ್ಲಿರುವ ಕಚೇರಿಗಳನ್ನೂ ಕಳೆದುಕೊಳ್ಳುವ ಸಾಧ್ಯತೆಗಳಿವೆ.

ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಒಂದು ಸ್ಥಾನ ಗೆದ್ದಿದ್ದರೆ, ಕಾಂಗ್ರೆಸ್‌ ಎರಡು ಸೀಟುಗಳನ್ನಷ್ಟೇ ಗಳಿಸಿದೆ.

ಎಂಟು ಕ್ಷೇತ್ರಗಳನ್ನು ಗೆದ್ದಿರುವ ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮತ್ತು ಆರು ಸ್ಥಾನಗಳನ್ನು ಪಡೆದಿರುವ ನಿಶಾದ್ ಪಕ್ಷಗಳಿಗೆ ವಿಧಾನ ಭವನದಲ್ಲಿ ಕಚೇರಿ ಕೊಠಡಿ ಹಂಚಿಕೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

‌ವಿಧಾನಸಭೆಯ ಒಟ್ಟು ಸ್ಥಾನಗಳ ಪೈಕಿ ಕನಿಷ್ಠ ಶೇ 1ರಷ್ಟು ವಿಧಾನಸಭಾ ಸ್ಥಾನಗಳನ್ನು ಅಥವಾ ಕನಿಷ್ಠ ನಾಲ್ಕು ಸ್ಥಾನಗಳನ್ನು ಗೆದ್ದ ಪಕ್ಷಕ್ಕೆ ವಿಧಾನ ಭವನದಲ್ಲಿ ಕಚೇರಿ ಒದಗಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

2017ರ ಚುನಾವಣೆಯಲ್ಲಿ ಆರ್‌ಎಲ್‌ಡಿ ಒಂದು ಸ್ಥಾನವನ್ನು ಮಾತ್ರ ಗಳಿಸಿತ್ತು. ಹೀಗಾಗಿ ಪಕ್ಷಕ್ಕೆ ವಿಧಾನ ಭವನದಲ್ಲಿ ಕಚೇರಿ ಸಿಕ್ಕಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT