ಲಖನೌ(ಉತ್ತರಪ್ರದೇಶ):ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆಮಾಯಾವತಿಅವರು ಎನ್ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನಕರ್ಗೆ ತಮ್ಮ ಪಕ್ಷದ ಬೆಂಬಲವನ್ನು ಘೋಷಿಸಿದ್ದಾರೆ.

ಈ ಬಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರುಸಾರ್ವಜನಿಕ ಹಿತಾಸಕ್ತಿ ಮತ್ತು ತಮ್ಮ ಪಕ್ಷದ ಹೋರಾಟದ ದೃಷ್ಟಿಯಿಂದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರಿಗೆ ಬೆಂಬಲ ನೀಡಲು ನಮ್ಮ ಪಕ್ಷ ನಿರ್ಧಾರ ಮಾಡಿದೆ. ಈ ಬಗ್ಗೆ ನಾನು ಇಂದು ಔಪಚಾರಿಕವಾಗಿ ಘೋಷಣೆ ಮಾಡುತ್ತೀದ್ದೇನೆ ಎಂದು ಟ್ವೀಟ್ಮಾಡಿದ್ದಾರೆ.

ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇದೇ ಆಗಸ್ಟ್ 10 ರಂದು ಕೊನೆಯಾಗಲಿದೆ.

ಬಿಜೆಪಿ ನೇತೃತ್ವದಎನ್ಡಿಎ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಕಣಕ್ಕೆ ಇಳಿಸಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ರಾಜ್ಯದ ಮಾರ್ಗರೇಟ್ ಆಳ್ವ ಅವರನ್ನು ತಮ್ಮ ಅಭ್ಯರ್ಥಿ ಎಂದು ಘೋಷಣೆ ಮಾಡಿವೆ.

ವೃತ್ತಿಯಲ್ಲಿ ವಕೀಲರಾಗಿರುವ ಜಗದೀಪ್ ಧನಕರ್ 1989ರಲ್ಲಿ ರಾಜಕೀಯ ಪ್ರವೇಶಿಸಿದರು. ಅವರು ಜುಲೈ 2019ರಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು.

ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾಗಿರುವ ಭಾರತದ ಉಪರಾಷ್ಟ್ರಪತಿಯನ್ನು ವಿಧಾನಸಭೆ, ರಾಜ್ಯಸಭೆ ಮತ್ತು ಲೋಕಸಭೆ ಸದಸ್ಯರು ಆಯ್ಕೆ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.