ಗುರುವಾರ , ಮಾರ್ಚ್ 4, 2021
17 °C

ಇಂಧನ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಬಿಎಸ್‌ಪಿ ವರಿಷ್ಠೆ ಮಾಯಾವತಿ ವಾಗ್ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

BSP supremo Mayawati. Credit: PTI file photo

ಲಖನೌ: ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಬೆಲೆ ಏರಿಕೆಗೆ ಸಂಬಂಧಿಸಿ ಕೇಂದ್ರ ಸರ್ಕಾರದ ವಿರುದ್ಧ ಬಿಎಸ್‌ಪಿ ವರಿಷ್ಠೆ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ. ಸಾರ್ವಜನಿಕರ ಕಲ್ಯಾಣಕ್ಕೆಂದು ಈ ರೀತಿ ತೆರಿಗೆ ವಿಧಿಸುವ ಮೂಲಕ ನಿಧಿ ಸಂಗ್ರಹಿಸುವುದು ಅನ್ಯಾಯ ಎಂದು ಅವರು ಟೀಕಿಸಿದ್ದಾರೆ.

ಕೇಂದ್ರದ ಧೋರಣೆ ಖಂಡಿಸಿ ಟ್ವೀಟ್ ಮಾಡಿರುವ ಅವರು, ‘ಕೋವಿಡ್–19 ಸಾಂಕ್ರಾಮಿಕ, ನಿರುದ್ಯೋಗ ಹಾಗೂ ಹಣದುಬ್ಬರದಿಂದ ಈಗಾಗಲೇ ಹೈರಾಣಾಗಿರುವ ಜನರಿಗೆ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿಯ ನಿರಂತರ ಮತ್ತು ಅನಗತ್ಯ ಬೆಲೆ ಏರಿಕೆ ಮೂಲಕ ಮತ್ತಷ್ಟು ತೊಂದರೆ ನೀಡುವುದು ತಪ್ಪು’ ಎಂದು ಹೇಳಿದ್ದಾರೆ.

ಓದಿ: 

‘ಪೆಟ್ರೋಲ್, ಡೀಸೆಲ್ ಇತ್ಯಾದಿಗಳ ಮೇಲಿನ ತೆರಿಗೆಯನ್ನು ನಿರಂತರವಾಗಿ ಮತ್ತು ನಿರಂಕುಶವಾಗಿ ಹೆಚ್ಚಿಸುವ ಮೂಲಕ ಸಾರ್ವಜನಿಕರ ಜೇಬಿನ ಮೇಲೆ ಈ ರೀತಿ ಹೊರೆ ಹೇರುವುದನ್ನು ತಕ್ಷಣವೇ ನಿಲ್ಲಿಸಬೇಕಿದೆ. ವಾಸ್ತವವಾಗಿ ಅದು ಕೋಟ್ಯಂತರ ಬಡವರು, ಕಷ್ಟಪಟ್ಟು ದುಡಿಯುವ ಜನರು ಮತ್ತು ಮಧ್ಯಮ ವರ್ಗದವರಿಗೆ ಸರ್ಕಾರವು ಮಾಡುವ ದೊಡ್ಡ ಪ್ರಯೋಜನವಾಗಲಿದೆ’ ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ದೇಶದಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಂಗಳವಾರವೂ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 25 ಪೈಸೆ ಹೆಚ್ಚಾಗಿದ್ದು, ₹90.83 ಆಗಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿ ₹81.32 ಆಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು