ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಬಿಎಸ್‌ವೈ ‘ಸುಪ್ರೀಂ’ಗೆ

ಭ್ರಷ್ಟಾಚಾರ ಪ್ರಕರಣ: ಇಂದು ಅರ್ಜಿಯ ವಿಚಾರಣೆ
Last Updated 19 ಸೆಪ್ಟೆಂಬರ್ 2022, 4:55 IST
ಅಕ್ಷರ ಗಾತ್ರ

ನವದೆಹಲಿ: ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠವು ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ.

ಯಡಿಯೂರಪ್ಪ ಸೇರಿದಂತೆ ಒಂಬತ್ತು ಮಂದಿ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆಗೆ ಆದೇಶಿಸುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT