ಉತ್ತರ ಪ್ರದೇಶ: ಠಾಣೆ ಎದುರೇ ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಬದೌನ್ (ಉತ್ತರ ಪ್ರದೇಶ): ಬೆಳೆ ಹಾಳು ಮಾಡಿದ್ದ ವ್ಯಕ್ತಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸುತ್ತಿಲ್ಲ ಎಂದು ಆರೋಪಿಸಿ ಉತ್ರರಪ್ರದೇಶದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಚೇರಿ ಎದುರೇ ಬೆಂಕಿ ಹಚ್ಚಿಕೊಂಡಿದ್ದ ರೈತ ಮೃಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಕೃಷ್ಣಪಾಲ್ ಮೃತ ರೈತ. ಬುಧವಾರ ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ ಕೃಷ್ಣಪಾಲ್ ಅವರನ್ನು ಬರೇಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಬೆನ್ನಲ್ಲೇ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ, ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಎರಡು ವಾರಗಳ ಹಿಂದೆ ದುಷ್ಕರ್ಮಿಗಳು ಕಷ್ಣಪಾಲ್ ಅವರ ಹೊಲಕ್ಕೆ ಬೆಂಕಿ ಇಟ್ಟಿದ್ದರು. ಈ ಸಂಬಂಧ ಏ.25ರಂದು ಮಂಡಿ ಸಮಿತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಎಸ್ಎಸ್‌ಪಿಗೂ ಅರ್ಜಿ ನೀಡಲಾಗಿತ್ತು. ಆದರೆ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೇಸತ್ತು ಕೃಷ್ಣಪಾಲ್ ಬುಧವಾರ ಬೆಂಕಿ ಹಚ್ಚಿಕೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.