ಬುಧವಾರ, ಜನವರಿ 20, 2021
27 °C

ಬದಾಯುಂ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿಯ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬದಾಯುಂ (ಉತ್ತರ ಪ್ರದೇಶ): ಬದಾಯುಂನಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನು ಗುರುವಾರ ರಾತ್ರಿ ಬಂಧಿಸಲಾಗಿದ್ದು, ರಾತ್ರಿ ಪೂರ್ತಿ ಆತನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ಪೊಲೀಸ್‌ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

‘ಪ್ರಮುಖ ಆರೋಪಿಯಾದ ಪುರೋಹಿತ ಸತ್ಯ ನಾರಯಣ, ತನ್ನ ಸಹಚರನೊಬ್ಬನ ಮನೆಯಲ್ಲಿ ತಲೆ ಮರೆಸಿಕೊಂಡಿದ್ದ. ಆತನನ್ನು ಪತ್ತೆ ಹಚ್ಚಲು ಪೊಲೀಸರ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಸಂಕಲ್ಪ ಶರ್ಮಾ ತಿಳಿಸಿದರು.

ಇದನ್ನೂ ಓದಿ: ಉತ್ತರ ಪ್ರದೇಶ | ಅತ್ಯಾಚಾರ, ಕೊಲೆ: ಪುರೋಹಿತ ಸೇರಿ ಮೂವರ ವಿರುದ್ಧ ಪ್ರಕರಣ

‘ಸತ್ಯ ನಾರಯಣನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದು ಪೊಲೀಸರು ಹೇಳಿದರು.

ಉತ್ತರ ಪ್ರದೇಶದ ಬದಾಯುಂ ಜಿಲ್ಲೆಯಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆಯೊಬ್ಬರನ್ನು ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು. ಅವರ ಶವ ಭಾನುವಾರ ಪತ್ತೆಯಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು