ಬುಧವಾರ, ಮೇ 25, 2022
27 °C

ಸಂಸತ್‌ನ ಬಜೆಟ್ ಅಧಿವೇಶನ: ಕಾಂಗ್ರೆಸ್‌ ಕಾರ್ಯತಂತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬೆಲೆ ಏರಿಕೆ, ಭಾರತ– ಚೀನಾ ಗಡಿ ವಿವಾದ, ಕೋವಿಡ್ ಪರಿಹಾರ ಪ್ಯಾಕೇಜ್‌ ಘೋಷಣೆ ಹಾಗೂ ರೈತರ ಸಮಸ್ಯೆಗಳ ಕುರಿತು ಸೋಮವಾರದಿಂದ ಆರಂಭವಾಗಲಿರುವ ಸಂಸತ್‌ನ ಬಜೆಟ್ ಅಧಿವೇಶನದಲ್ಲಿ ಧ್ವನಿ ಎತ್ತಲು ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್‌ ನಿರ್ಧರಿಸಿದೆ.

ಅಧಿವೇಶನ ಕುರಿತ ಕಾರ್ಯತಂತ್ರ ರೂಪಿಸಲು ಶುಕ್ರವಾರ ಇಲ್ಲಿ ಆಯೋಜಿಸಿದ್ದ ಪಕ್ಷದ ಮಹತ್ವದ ಸಭೆಯಲ್ಲಿ ಚರ್ಚಿಸಿದ ಮುಖಂಡರು, ಹೋರಾಟದಲ್ಲಿ ಭಾಗಿಯಾಗುವಂತೆ ಸಮಾನ ಮನಸ್ಕ ಪಕ್ಷಗಳನ್ನೂ ಕೋರಲು ನಿರ್ಧರಿಸಿದರು. ಬಜೆಟ್‌ ಅಧಿವೇಶನದ ಮೊದಲ ಹಂತವು ಜನವರಿ 31ರಿಂದ ಫೆಬ್ರುವರಿ 11ರವರೆಗೆ ಇರಲಿದ್ದು, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಮಾರ್ಚ್‌ 14ರಿಂದ ಎರಡನೇ ಹಂತ ಆರಂಭವಾಗಲಿದೆ. ಮೊದಲ ಹಂತದಲ್ಲಿ ರಾಷ್ಟ್ರಪತಿ ಭಾಷಣ ಹಾಗೂ ಬಜೆಟ್‌ ಮೇಲಿನ ನಿಗದಿತ ಚರ್ಚೆಗಳು ನಡೆಯುವುದರಿಂದ ಕಲಾಪಕ್ಕೆ ಅಡ್ಡಿಪಡಿಸದಿರಲು ನಿರ್ಧರಿಸಲಾಗಿದೆ. ಏರ್ ಇಂಡಿಯಾ ಮಾರಾಟ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಅನ್ಯಾಯಕ್ಕೆ ಒಳಗಾಗಿರುವ ರೈಲ್ವೇ ಉದ್ಯೋಗಾಕಾಂಕ್ಷಿಗಳ ಪರ ಎರಡನೇ ಹಂತದಲ್ಲಿ ಧ್ವನಿ ಎತ್ತಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು