ಉತ್ತರ ಪ್ರದೇಶ: ಗುಂಡಿಕ್ಕಿ ಇಬ್ಬರು ಬಿಲ್ಡರ್‌ಗಳ ಹತ್ಯೆ

ನೋಯ್ಡಾ: ಬಿಲ್ಡರ್‌ಗಳಿಬ್ಬರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದರು.
ಗ್ರೇಟರ್ ನೋಯ್ಡಾದ ಅಜ್ನಾರಾ ಲೆ ಗಾರ್ಡನ್ ಸೊಸೈಟಿ ಬಳಿ ಕುಳಿತಿದ್ದ ದಲ್ಚಾಂದ್ ಶರ್ಮಾ ಮತ್ತು ಅರುಣ್ ತ್ಯಾಗಿ ಮೇಲೆ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
‘ಪ್ರಕರಣ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ. ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.