ಬುಧವಾರ, ಸೆಪ್ಟೆಂಬರ್ 30, 2020
20 °C

ತಮಿಳುನಾಡು: ಕಟ್ಟಡ ಕುಸಿತ, ಇಬ್ಬರು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಯಮತ್ತೂರು: ಇಲ್ಲಿ ಭಾರಿ ಮಳೆಯಿಂದಾಗಿ ಭಾನುವಾರ ರಾತ್ರಿ ಕಟ್ಟಡ ಕುಸಿದಿದ್ದು, ಅವಶೇಷಗಳಡಿ ಸಿಲುಕಿ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದರು.

ಕೊಯಮತ್ತೂರಿನ ಚತುರ್ವೇದಿ ರಸ್ತೆಯಲ್ಲಿ ಕಟ್ಟಡವೊಂದು ಭಾನುವಾರ ರಾತ್ರಿ 10.30 ಕ್ಕೆ ಕುಸಿದಿದೆ. ತಕ್ಷಣವೇ  ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳಡಿ ಸಿಲುಕಿದ್ದ ಐವರನ್ನು ರಕ್ಷಿಸಲಾಗಿದೆ. ಆದರೆ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಆರು ವರ್ಷದ ಮಗುವನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದ್ದು , ಇತರರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದರು.

ಈ ರಕ್ಷಣಾ ಕಾರ್ಯಾಚರಣೆಯ ನೇತೃತ್ವವನ್ನು ಜಿಲ್ಲಾಧಿಕಾರಿ ಕೆ. ರಾಜಾಮನಿ ಮತ್ತು ಪೊಲೀಸ್‌ ಆಯುಕ್ತ ಸುಮಿತ್‌ ಸರಣ್ ಅವರು‌ ವಹಿಸಿದ್ದಾರೆ.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು