ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಕಟ್ಟಡ ಕುಸಿತ, ನಾಲ್ಕು ಮಂದಿ ಸಾವು

Last Updated 12 ಫೆಬ್ರುವರಿ 2022, 2:21 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಬವಾನಾ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದು, ಮಹಿಳೆ ಹಾಗೂ ಒಂಬತ್ತು ವರ್ಷದ ಬಾಲಕಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಘಟನೆ ಸಂಭವಿಸಿದೆ. ಅವಶೇಷಗಳ ಅಡಿಯಿಂದ ಇಬ್ಬರುಮಹಿಳೆಯರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.

ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಮೃತರನ್ನು ರುಕೈಯ ಖಾತುನ್ (55), ಶಹಜಾದ್ (25), ಆಫ್ರಿನ್ (9) ಮತ್ತು ಡ್ಯಾನಿಶ್ (24) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಜೆ.ಜೆ. ಕಾಲನಿ ನಿವಾಸಿಗಳಾಗಿದ್ದಾರೆ.

ಅಪರಾಹ್ನ 2.48ರ ಹೊತ್ತಿಗೆ ಅಗ್ನಿಶಾಮಕದಳಕ್ಕೆ ಮಾಹಿತಿ ತಲುಪಿತ್ತು. ಬಳಿಕ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳನ್ನು ರವಾನಿಸಲಾಗಿತ್ತು. ಮೂರು ಜೆಸಿಬಿಗಳೂ ನಾಲ್ಕು ಗಂಟೆಗೂ ಹೆಚ್ಚು ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿದ್ದವು.

ಕುಸಿದ ಕಟ್ಟಡವು ರಾಜೀವ್ ರತನ್ ಆವಾಸ್ ಯೋಜನೆಯ ಭಾಗವಾಗಿದೆ. ಅವು ಸುಮಾರು 300ರಿಂದ 400 ಫ್ಲ್ಯಾಟ್‌ಗಳನ್ನು ಹೊಂದಿದೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ ಹೊರವಲಯ) ಬ್ರಿಜೆಂದರ್ ಕುಮಾರ್ ಯಾದವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT