ಗುರುವಾರ , ಜುಲೈ 29, 2021
23 °C

ರಸ್ತೆಗಳ ನಿರ್ಮಾಣದಿಂದ ಜೀವವೈವಿಧ್ಯ ನಾಶವಾಗಬಾರದು: ಎನ್‌ಜಿಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಸ್ತೆಗಳ ನಿರ್ಮಾಣ ಕಾರ್ಯವು ಜೀವವೈವಿಧ್ಯವನ್ನು ನಾಶಪಡಿಸುವಂತಿರಬಾರದು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಬುಧವಾರ ಹೇಳಿದೆ.

ಕೃಷಿ ಭೂಮಿ, ಜಲಚರಗಳು ಹಾಗೂ ಇತರ ಪ್ರಾಕೃತಿಕ ಸಂಪನ್ಮೂಲಗಳ ಸಂರಕ್ಷಣೆಗಾಗಿ ರೂಪಿಸಿರುವ ನಿಯಮಗಳಿಗೆ ಅನುಸಾರವಾಗಿಯೇ ರಸ್ತೆಗಳನ್ನು ನಿರ್ಮಿಸಬೇಕು ಎಂದು ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶಕುಮಾರ್‌ ಗೋಯೆಲ್‌ ಅವರಿರುವ ಪ್ರಧಾನಪೀಠ ಹೇಳಿತು.

ಗೋವಾದಲ್ಲಿ ಮಾರ್ಗೋವಾ ರಾಷ್ಟ್ರೀಯ ಹೆದ್ದಾರಿಯ ಪಶ್ಚಿಮ ಬೈಪಾಸ್‌ ರಸ್ತೆ ನಿರ್ಮಿಸುವುದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮಂಡಳಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು