ಸೋಮವಾರ, ಜನವರಿ 17, 2022
19 °C

ಬುಲ್ಲಿ ಬಾಯಿ: ಆರೋಪಿಗಳ ಪೊಲೀಸ್‌ ಕಸ್ಟಡಿ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ : ಬುಲ್ಲಿ ಬಾಯಿ ಆ್ಯಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶ್ವೇತಾ ಸಿಂಗ್‌ ಮತ್ತು ಮಯಂಕ್‌ ರಾವಲ್‌ ಅವರು ಈ ತಿಂಗಳ 14ರವರೆಗೂ ಪೊಲೀಸ್‌ ಕಸ್ಟಡಿಯಲ್ಲಿಯೇ ಇರಲಿದ್ದಾರೆ.

ಪ್ರಕರಣದ ತನಿಖೆಯು ನಿರ್ಣಾಯಕ ಹಂತದಲ್ಲಿದ್ದು ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯವಿದೆ. ಆದ್ದರಿಂದ ಆರೋಪಿಗಳಾದ ಶ್ವೇತಾ ಸಿಂಗ್‌ (18) ಮತ್ತು ರಾವಲ್ (21) ಅವರನ್ನು ಇನ್ನೂ ಸ್ವಲ್ಪ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಬಾಂದ್ರಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್‌ಗೆ ಪೊಲೀಸರು ಸೋಮವಾರ ಮನವಿ ಮಾಡಿದರು. ನ್ಯಾಯಾಲಯ ಇದನ್ನು ಮಾನ್ಯಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾಗಿರುವ ಮೊದಲ ಆರೋಪಿ ವಿಶಾಲ್‌ ಕುಮಾರ್‌ ಝಾಗೆ ಜನವರಿ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಸಿಂಗ್ ಮತ್ತು ರಾವಲ್ ಅವರನ್ನು ಮುಂಬೈ ಪೊಲೀಸರ ಅಪರಾಧ ದಳ ಜನವರಿ 5 ರಂದು ಉತ್ತರಾಖಂಡದಲ್ಲಿ ಬಂಧಿಸಿದ್ದರು. ಝಾ ಅವರನ್ನು ಜನವರಿ 4 ರಂದು ಬೆಂಗಳೂರಿನಲ್ಲಿ ಬಂಧಿಸಲಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು