ಸೋಮವಾರ, ಜನವರಿ 24, 2022
29 °C
ಉತ್ತರಾಖಂಡದಲ್ಲಿ ಬಂಧಿತ ಆರೋಪಿಗಳು

ಬುಲ್ಲಿ ಬಾಯಿ ಪ್ರಕರಣ: ಇಬ್ಬರು ವಿದ್ಯಾರ್ಥಿಗಳು ಜ.10ರ ವರೆಗೆ ಪೊಲೀಸ್‌ ಕಸ್ಟಡಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ಬುಲ್ಲಿ ಬಾಯಿ’ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಸೈಬರ್‌ ಕ್ರೈಂ ಪೊಲೀಸರು ಉತ್ತರಾಖಂಡದಲ್ಲಿ ಬಂಧಿಸಿರುವ ಇಬ್ಬರು ವಿದ್ಯಾರ್ಥಿಗಳನ್ನು ಜ.10ರ ವರೆಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ ಇಲ್ಲಿನ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ಆರೋಪಿಗಳಾದ ಶ್ವೇತಾ ಸಿಂಗ್ (18) ಹಾಗೂ ಮಯಂಕ್‌ ರಾವಲ್‌ (21) ಅವರನ್ನು ಪೊಲೀಸರು ಇಲ್ಲಿನ ಬಾಂದ್ರ ಮೆಟ್ರೊಪಾಲಿಟನ್ ಕೋರ್ಟ್‌ಗೆ ಹಾಜರುಪಡಿಸಿದರು.

‘ಇದೇ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿ ವಿಶಾಲಕುಮಾರ್‌ ಝಾ ಎಂಬ ವಿದ್ಯಾರ್ಥಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಜ. 10ರ ವರೆಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಆತನ ಜೊತೆಯೇ ವಿಚಾರಣೆಗೆ ಒಳಪಡಿಸಬೇಕಿರುವ ಕಾರಣ, ಈ ಇಬ್ಬರು ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡುವಂತೆ’ ಪೊಲೀಸರು ಮನವಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು