ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಲ್ಲಿ ಬಾಯ್ ಕೇಸ್‌ನಲ್ಲಿ ಬಂಧನಕ್ಕೊಳಗಾದ ಯುವತಿ ವಿದ್ಯಾರ್ಥಿನಿ!

Last Updated 5 ಜನವರಿ 2022, 1:52 IST
ಅಕ್ಷರ ಗಾತ್ರ

ಮುಂಬೈ: ಬುಲ್ಲಿ ಬಾಯ್ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಉತ್ತರಾಖಂಡದಲ್ಲಿ ಬಂಧಿಸಿರುವ ಯುವತಿ ಓರ್ವ ವಿದ್ಯಾರ್ಥಿನಿ ಎಂಬುದು ತಿಳಿದು ಬಂದಿದೆ.

18 ವರ್ಷದ ಈ ಯುವತಿಯನ್ನು ಉತ್ತರಾಖಂಡದಿಂದ ಪೊಲೀಸರು ಬಂಧಿಸಿ ಮುಂಬೈಗೆ ಕರೆ ತಂದಿದ್ದು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಇದೇ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್‌ಗೆ ಹಾಗೂ ಬಂಧಿತ ಯುವತಿಗೆ ನಿಕಟ ಸಂಪರ್ಕ ಇತ್ತು ಎನ್ನಲಾಗಿದೆ.

ಉತ್ತರ ಪ್ರದೇಶ ಮೂಲದ ಈ ಯುವತಿ ಕೆಲ ದಿನಗಳ ಹಿಂದೆ ಉತ್ತರಾಖಂಡಕ್ಕೆ ವಲಸೆ ಹೋಗಿದ್ದು, ಇತ್ತೀಚೆಗೆ ದ್ವಿತೀಯ ಪಿಯುಸಿ ಮುಗಿಸಿ ಕಾಲೇಜು ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು.

ಪಶ್ಚಿಮ ಮುಂಬೈನ ಸೈಬರ್ ಪೊಲೀಸ್ ಠಾಣೆಯು ‘ಬುಲ್ಲಿ ಬಾಯ್’ ಅಪ್ಲಿಕೇಷನ್ ಅಭಿವೃದ್ಧಿಪಡಿಸಿದವರು ಮತ್ತು ಈ ಆ್ಯಪ್‌ ಅನ್ನು ಪ್ರಚಾರ ಮಾಡಿದ ಟ್ವಿಟರ್ ಬಳಕೆದಾರರ ವಿರುದ್ಧ ಪ್ರಕರಣ ದಾಖಲಿಸಿದೆ.

ಏನಿದು ಪ್ರಕರಣ?:‘ಬುಲ್ಲಿ ಬಾಯ್’ಆ್ಯಪ್‌ಗೆ 100ಕ್ಕೂ ಹೆಚ್ಚು ಪ್ರಭಾವಿ ಮುಸ್ಲಿಂ ಮಹಿಳೆಯರ ಭಾವಚಿತ್ರಗಳನ್ನುಅಪ್‌ಲೋಡ್‌ ಮಾಡಿ ಇವರನ್ನು ಹರಾಜಿಗಿಡಲಾಗಿದೆ ಎಂಬ ಒಕ್ಕಣೆಯೊಂದಿಗೆ ಅವಹೇಳನ ಮಾಡಿರುವುದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

ಈ ಸಂಬಂಧ ಪತ್ರಕರ್ತೆಯೊಬ್ಬರು ನೀಡಿರುವ ದೂರಿನ ಆಧಾರದಲ್ಲಿ ದೆಹಲಿ ಪೊಲೀಸರು ಭಾನುವಾರ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಕುರಿತು ಮುಂಬೈನ ಸೈಬರ್‌ ಕ್ರೈಂ ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ. ಬಳಿಕ ಈ ಆ್ಯಪ್‌ ಅನ್ನು ನಿರ್ಬಂಧಿಸಲಾಗಿದೆ.

‘ಬುಲ್ಲಿ ಬಾಯ್’ಆ್ಯಪ್‌ ಅನ್ನು ನಿರ್ಬಂಧಿಸಿರುವುದಾಗಿ ಗಿಟ್‌ಹಬ್‌ ವೇದಿಕೆಯು ದೃಢಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT