ಸೋಮವಾರ, ಸೆಪ್ಟೆಂಬರ್ 20, 2021
29 °C

ಜಮ್ಮು–ಕಾಶ್ಮೀರ: ಹತ್ಯೆಗೀಡಾದ ಉಗ್ರ ಬುರ್ಹಾನ್‌ ವಾನಿ ತಂದೆಯಿಂದ ಧ್ವಜಾರೋಹಣ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು–ಕಾಶ್ಮೀರದ ಪುಲ್ವಾಮ ಜಿಲ್ಲೆಯ ಶಾಲೆಯೊಂದರಲ್ಲಿ ಭಾನುವಾರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹತ್ಯೆಗೀಡಾದ ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆಯ ಉಗ್ರ ಬುರ್ಹಾನ್‌ ವಾನಿಯ ತಂದೆ ಮುಜಾಫರ್‌ ವಾನಿ ಅವರು ಧ್ವಜಾರೋಹಣ ಮಾಡಿದರು.

‘ವೃತ್ತಿಯಲ್ಲಿ ಶಿಕ್ಷಕರಾಗಿರುವ ಮುಜಾಫರ್‌ ವಾನಿ ಅವರು, ತ್ರಾಲ್‌ನ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ಮಾಡಿದರು’ ಎಂದು ಅಧಿಕಾರಿಗಳು ತಿಳಿಸಿದರು.

2016ರ ಜುಲೈನಲ್ಲಿ ದಕ್ಷಿಣ ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಬುರ್ಹಾನ್‌ ವಾನಿ ಹತ್ಯೆಗೀಡಾಗಿದ್ದ. ಇದನ್ನು ವಿರೋಧಿಸಿ ಜಮ್ಮು–ಕಾಶ್ಮೀರದಲ್ಲಿ ಐದು ತಿಂಗಳ ಕಾಲ ಪ್ರತಿಭಟನೆಗಳು ನಡೆದಿದ್ದವು.

‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಭಾಗವಾಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ಧ್ವಜಾರೋಹಣ ಮಾಡಬೇಕೆಂದು ಕೇಂದ್ರಾಡಳಿತ ಪ್ರದೇಶದ ಆಡಳಿತವು ನಿರ್ದೇಶಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು