ರಾಜಸ್ಥಾನದಲ್ಲಿ ಬಸ್‌ಗೆ ಬೆಂಕಿ; ಆರು ಮಂದಿ ಸಾವು

ಜೈಪುರ: ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆರು ಮಂದಿ ಸಾವಿಗೀಡಾಗಿದ್ದಾರೆ.
ಎಲೆಕ್ಟ್ರಿಕ್ ಕೇಬಲ್‌ಗೆ ತಾಗಿದ್ದರಿಂದ ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವ ಆರು ಮಂದಿ ದಹನವಾಗಿರುವ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಇದೇ ಅವಘಡದಲ್ಲಿ 19 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಪ್ರಯಾಣಿಕರಿಂದ ಭರ್ತಿಯಾಗಿದ್ದ ಬಸ್ ಮಂಡೋರ್‌ನಿಂದ ಬ್ಯಾವರ್ ಕಡೆಗೆ ಸಾಗುತ್ತಿತ್ತು.
ತೀವ್ರವಾಗಿ ಗಾಯಗೊಂಡಿರುವ ಆರು ಜನರನ್ನು ಜೋಧಪುರದ ಆಸ್ಪತ್ರೆಗೆ ಸಾಗಿಸಲಾಗಿದೆ, 13 ಮಂದಿ ಜಾಲೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಾಲೋರ್‌ನ ಮುಖ್ಯ ಆರೋಗ್ಯ ಅಧಿಕಾರಿ ಡಾ.ಎಸ್.ಪಿ.ಶರ್ಮಾ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.