ಬುಧವಾರ, ಅಕ್ಟೋಬರ್ 28, 2020
28 °C

ಮಹಾರಾಷ್ಟ್ರ: ಅನುಮತಿಯಿಲ್ಲದೇ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪನೆ

‍‍ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪುಣೆ: ಕೊಲ್ಹಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತರು ಅನುಮತಿಯಿಲ್ಲದೆ ಛತ್ರಪತಿ ಶಿವಾಜಿ ಅವರ ಪ್ರತಿಮೆ ಸ್ಥಾ‍‍ಪಿಸಿದ್ದು, ಬಳಿಕ ತೆರವುಗೊಳಿಸಲಾಯಿತು ಎಂದು ಪೊಲೀಸರು ಸೋಮವಾರ ತಿಳಿಸಿದರು. 

ಶಾಹುವಾಡಿಯ ಬಂಬವಾಡೆ ಗ್ರಾಮದಲ್ಲಿ ಪ್ರತಿಮೆ ಸ್ಥಾಪಿಸಲಾಗಿತ್ತು. ತೆರವುಗೊಳಿಸಲು ಸ್ಥಳೀಯರು ವಿರೋಧಿಸಿದರಾದರೂ, ಅವರ ಮನವೊಲಿಸಿ ತೆರವುಗೊಳಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಬಾಲಚಂದ್ರ ದೇಶ್‌ಮುಖ್‌ ಅವರು ಹೇಳಿದರು.

ಈ ಸಂಬಂಧ ಪ್ರಕರಣವನ್ನು ಕೂಡ ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.