ಶನಿವಾರ, ನವೆಂಬರ್ 28, 2020
17 °C

ಉಪಚುನಾವಣೆ: 11 ರಾಜ್ಯಗಳ 59 ಕ್ಷೇತ್ರಗಳ ಪೈಕಿ 40 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್‌/ಲಖನೌ/ಅಹಮದಾಬಾದ್‌:‌ 11 ರಾಜ್ಯಗಳ 59 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದ್ದು, ಮಧ್ಯಪ್ರದೇಶದ 21 ಕ್ಷೇತ್ರಗಳು ಸೇರಿದಂತೆ ಬಿಜೆಪಿಯು 40 ಸ್ಥಾನಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ ಎಂದು ಚುನಾವಣಾ ಆಯೋಗ ವೆಬ್‌ಸೈಟ್‌ನಲ್ಲಿ ಹೇಳಲಾಗಿದೆ.

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಇದು ಪ್ರತಿಷ್ಠೆಯ ಕಣವಾಗಿದ್ದು, ಪ್ರತಿಸ್ಪರ್ಧಿ ಕಾಂಗ್ರೆಸ್‌ ವಿರುದ್ಧ ತಮ್ಮ ಸರ್ಕಾರವನ್ನು ಉಳಿಸಲು ಸೆಣಸಾಡುತ್ತಿದ್ದಾರೆ. ಇಲ್ಲಿ 28 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಬಿಜೆಪಿಯು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ಆರು ಸ್ಥಾನ ಮತ್ತು ಬಿಎಸ್‌ಪಿ ಒಂದು ಸ್ಥಾನದಲ್ಲಿ ಮುಂದಿದೆ.

ಗುಜರಾತ್‌ನಲ್ಲಿ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳು ಮತ್ತು ಉತ್ತರ ಪ್ರದೇಶದಲ್ಲಿ ಏಳು ಸ್ಥಾನಗಳ ಪೈಕಿ ಆರು ಕ್ಷೇತ್ರಗಳಲ್ಲಿ ಆಡಳಿತರೂಢ ಪಕ್ಷ ಬಿಜೆಪಿಯು ಮುನ್ನಡೆ ಸಾಧಿಸಿದೆ.

ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ. ಮತಗಳ ಎಣಿಕೆ ನಡೆಯುತ್ತಿರುವ ಕೊಠಡಿಯಲ್ಲಿ ಜನರ ಸಂಖ್ಯೆಯನ್ನು ಸೀಮಿತಗೊಳಿಸಲಾಗಿದ್ದು, ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು