ಮಂಗಳವಾರ, ಸೆಪ್ಟೆಂಬರ್ 29, 2020
25 °C
ಬಿಹಾರ ವಿಧಾನಸಭೆ ಜೊತೆಗೆ 65 ಕ್ಷೇತ್ರಗಳ ಉಪಚುನಾವಣೆಗೆ ಆಯೋಗ ನಿರ್ಧಾರ

ಶಿರಾ ಕ್ಷೇತ್ರದ ಉಪಚುನಾವಣೆ ದಿನಾಂಕ ಶೀಘ್ರ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ ವಿವಿಧ ರಾಜ್ಯಗಳ 65 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಸದ್ಯದಲ್ಲೇ ಉಪ ಚುನಾವಣೆ ದಿನಾಂಕ ಪ್ರಕಟಿಸುವುದಾಗಿ ಆಯೋಗದ ವಕ್ತಾರರು ತಿಳಿಸಿದ್ದಾರೆ. 

ಕರ್ನಾಟಕದ ಶಿರಾ ವಿಧಾನಸಭಾ ಕ್ಷೇತ್ರವೂ ಇದರಲ್ಲಿ ಸೇರಿದೆ. ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಅವರ ನಿಧನದಿಂದ ಶಿರಾ ಕ್ಷೇತ್ರ ತೆರವಾಗಿದೆ. ಮಧ್ಯಪ್ರದೇಶದಲ್ಲಿ 22 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಜ್ಯೋತಿ
ರಾದಿತ್ಯ ಸಿಂಧಿಯಾ ಅವರ ಜತೆ ಗುರುತಿಸಿಕೊಂಡಿದ್ದ ಶಾಸಕರ ರಾಜೀನಾಮೆಯಿಂದ ಈ ಕ್ಷೇತ್ರಗಳು ತೆರವಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು