ಬುಧವಾರ, ಆಗಸ್ಟ್ 10, 2022
25 °C
ತಿರುಪತಿಯಿಂದ ನಿವೃತ್ತ ಅಧಿಕಾರಿ ರತ್ನಪ್ರಭಾ

ಉಪಚುನಾವಣೆ: ಬಿಜೆಪಿ ಟಿಕೆಟ್‌ ಘೋಷಣೆ, ಮಂಗಲಾ ಅಂಗಡಿ ಬೆಳಗಾವಿ ಅಭ್ಯರ್ಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದಿವಂಗತ ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅವರಿಗೆ ಬೆಳಗಾವಿ ಲೋಕಸಭೆ ಚುನಾವಣೆಯ ಬಿಜೆಪಿ ಟಿಕೆಟ್‌ ಘೋಷಣೆಯಾಗಿದೆ.

ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಕೋವಿಡ್‌–19ರಿಂದ ನವದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರ ತೆರವಾಗಿತ್ತು.

ಸಾಕಷ್ಟು ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದರೂ ಅಂಗಡಿ ಅವರ ಕುಟುಂಬ ಸದಸ್ಯರಿಗೇ  ಪಕ್ಷ ಆದ್ಯತೆ ನೀಡಿದೆ.


ಮಂಗಲಾ ಸುರೇಶ್‌ ಅಂಗಡಿ

ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಕ್ಕೆ ಪಕ್ಷದ ಕಾರ್ಯಕರ್ತ ಶರಣು ಸಲಗರ ಅವರಿಗೆ ಅದೃಷ್ಟ ಒಲಿದಿದ್ದು, ಮಸ್ಕಿ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಪ್ರತಾಪಗೌಡ ಪಾಟೀಲ ಅವರನ್ನೇ ಪಕ್ಷ ಅಭ್ಯರ್ಥಿಯನ್ನಾಗಿ ಘೋಷಿಸಿದೆ.


ಶರಣು ಸಲಗರ

ರತ್ನಪ್ರಭಾ ಕಣಕ್ಕೆ: ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಚುನಾವಣೆಯ ಅಭ್ಯರ್ಥಿಯನ್ನಾಗಿ ಬಿಜೆಪಿಯ ಘೋಷಿಸಿದೆ.

ಐಎಎಸ್‌ನ ಕರ್ನಾಟಕ ಕೇಡರ್‌ನ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ರತ್ನಪ್ರಭಾ, ಲೋಕಸಭೆ ಚುನಾವಣೆಯ ನಂತರ ಬಿಜೆಪಿ ಸೇರ್ಪಡೆಯಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು