ಶನಿವಾರ, ನವೆಂಬರ್ 28, 2020
25 °C
ಕೋವಿಡ್‌ನಿಂದ ಸಾವನ್ನಪ್ಪಿದ್ದ ಅಶೋಕ ಗಸ್ತಿ

ಅಶೋಕ ಗಸ್ತಿ ನಿಧನದಿಂದ ತೆರವಾದ ಸ್ಥಾನಕ್ಕೆ ಡಿ.1ರಂದು ಉಪಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕೆ ಡಿಸೆಂಬರ್ 1ರಂದು ಉಪಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಕೋವಿಡ್‌–19ನಿಂದಾಗಿ ಗಸ್ತಿ ಅವರು ಸೆಪ್ಟೆಂಬರ್ 17ರಂದು ನಿಧನರಾದರು. ಅವರ ರಾಜ್ಯಸಭಾ ಅವಧಿ 2026ರ ಜೂನ್‌ವರೆಗೆ ಇತ್ತು.  ಉಪ ಚುನಾವಣೆಗೆೆ ನವೆಂಬರ್ 11ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಆಯೋಗ ಪ್ರಕಟಣೆಯಲ್ಲಿ ಹೇಳಿದೆ.

ಮತದಾನ ಪೂರ್ಣಗೊಂಡ ಒಂದು ಗಂಟೆಯ ನಂತರ ಮತಎಣಿಕೆ ಕಾರ್ಯ ನಡೆಯಲಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು