ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆ ಫಲಿತಾಂಶ: ಮುನುಗೋಡ್‌‌ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ

Last Updated 6 ನವೆಂಬರ್ 2022, 5:13 IST
ಅಕ್ಷರ ಗಾತ್ರ

ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದುನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.

ಎಲ್ಲ ಏಳು ಕ್ಷೇತ್ರಗಳಲ್ಲಿ ಮತಎಣಿಕೆ ಆರಂಭಗೊಂಡಿದ್ದು, ಯಾವ ಪಕ್ಷ ಗೆಲ್ಲಲಿದೆ ಎಂಬುದು ಕುತೂಹಲ ಕೆರಳಿಸಿವೆ.

ಭಾರಿ ಕುತೂಹಲ ಕೆರಳಿಸಿರುವ ತೆಲಂಗಾಣದ ಮುನುಗೋಡ್‌ ಕ್ಷೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ನಾಲ್ಕನೇ ಸುತ್ತಿನ ಮತ ಎಣಿಕೆಅಂತ್ಯಕ್ಕೆ ಕೋಮಟಿರೆಡ್ಡಿ ರಾಜ್ ಗೋಪಾಲ ರೆಡ್ಡಿ 1,100 ಮತಗಳ ಮುನ್ನಡೆ ಗಳಿಸಿದ್ದಾರೆ.

ಹರಿಯಾಣದ ಆದಂಪುರ ಮತ್ತು ಉತ್ತರ ಪ್ರದೇಶದ ಗೋಲ ಗೋಕರ್ಣನಾಥ ಕ್ಷೇತ್ರದಲ್ಲೂ ಬಿಜೆಪಿ ಮುನ್ನಡೆ ಮುನ್ನಡೆಯಲ್ಲಿದೆ.

ಬಿಹಾರದ ಮೊಕಾಮಾ ಕ್ಷೇತ್ರದಲ್ಲಿ ಆರ್‌ಜೆಡಿಯ ನೀಲಂ ದೇವಿ ಮುನ್ನಡೆಯಲ್ಲಿದ್ದಾರೆ. ಮಹಾರಾಷ್ಟ್ರದ ಅಂಧೇರಿ ಪೂರ್ವದಲ್ಲಿ ಉದ್ಧವ್ ಠಾಕ್ರೆ ಅವರ ಶಿವ ಸೇನಾದ ನಾಯಕ ಋತುಜ ಲಟಕೆ, 4,277 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

ಬಿಹಾರದಲ್ಲಿ ಎರಡು ಮತ್ತು ಮಹಾರಾಷ್ಟ್ರ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು. ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಾದೇಶಿಕ ಪಕ್ಷಗಳು ಸವಾಲೊಡ್ಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT