ಗುರುವಾರ , ಅಕ್ಟೋಬರ್ 29, 2020
26 °C

ನ.3, 7ಕ್ಕೆ ಲೋಕಸಭಾ ಮತ್ತು 56 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ನವೆಂಬರ್ 3 ಮತ್ತು 7ರಂದು ಒಂದು ಲೋಕಸಭಾ ಸ್ಥಾನಕ್ಕೆ ಹಾಗೂ 12 ರಾಜ್ಯಗಳ 56 ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.

‘ಆದರೆ, ಈ ಸಮಯದಲ್ಲಿ ಇತರ ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿಲ್ಲ’ ಎಂದೂ ಆಯೋಗ ಸ್ಪಷ್ಟಪಡಿಸಿದೆ.

ನ. 3ರಂದು 54 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ನ. 7ರಂದು ಬಿಹಾರದ ಲೋಕಸಭಾ ಕ್ಷೇತ್ರ ಮತ್ತು ಮಣಿಪುರದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಎಲ್ಲಾ ಉಪಚುನಾವಣೆಗಳ ಮತ ಎಣಿಕೆ ಕಾರ್ಯ ನ. 10ರಂದು ನಡೆಯಲಿದೆ. ಇದರ ಜೊತೆಗೆ ಬಿಹಾರದ ಸಾಮಾನ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯವೂ ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು