ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಲೋಕಸಭಾ ಮತ್ತು ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

Last Updated 26 ಮೇ 2022, 1:55 IST
ಅಕ್ಷರ ಗಾತ್ರ

ನವದೆಹಲಿ: ಮೂರು ಲೋಕಸಭಾ ಕ್ಷೇತ್ರ ಮತ್ತು ವಿವಿಧ ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳಿಗೆ ಜೂನ್ 23ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.

ಉತ್ತರ ಪ್ರದೇಶದ ಅಜಂಗಢಮತ್ತು ರಾಂಪುರದಲ್ಲಿ ಕ್ರಮವಾಗಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಮೊಹಮ್ಮದ್ ಅಜಂ ಖಾನ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಲೋಕಸಭಾ ಸ್ಥಾನ ಮತ್ತು ಪಂಜಾಬ್‌ನಲ್ಲಿ ಭಗವಂತ ಮಾನ್ ಅವರು ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಕಂಡಿದ್ದರಿಂದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಉಳಿದಂತೆ ಜಾರ್ಖಂಡ್, ಆಂಧ್ರ ಪ್ರದೇಶ, ಅಗರ್ತಲಾ, ತ್ರಿಪುರಾಗಳಲ್ಲಿ ತೆರವಾಗಿರುವ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಜೂನ್ 26ರಂದು ಮತ ಎಣಿಕೆ ನಡೆಯುತ್ತದೆ ಎಂದು ಆಯೋಗ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT