ದೇಶದ 29 ವಿಧಾನಸಭಾ ಕ್ಷೇತ್ರ, 3 ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ

ನವದೆಹಲಿ: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳು ಸೇರಿ ದೇಶದ 29 ವಿಧಾನಸಭಾ ಕ್ಷೇತ್ರಗಳು ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಬೆಳಗ್ಗೆ 8 ಗಂಟೆಗೆ ಎಣಿಕೆ ಆರಂಭವಾಗಿದ್ದು, 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ದಾದ್ರಾ ಮತ್ತು ನಗರ್ ಹವೇಲಿಯಲ್ಲಿ ಎಣಿಕೆ ನಡೆಯುತ್ತಿದೆ.
ಅಕ್ಟೋಬರ್ 30 ರಂದು ಅಸ್ಸಾಂನ ಐದು, ಬಂಗಾಳದ ನಾಲ್ಕು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಮೇಘಾಲಯದ ತಲಾ ಮೂರು, ಬಿಹಾರ, ಕರ್ನಾಟಕ ಮತ್ತು ರಾಜಸ್ಥಾನದ ತಲಾ ಎರಡು ಮತ್ತು ಆಂಧ್ರಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಮಿಜೋರಾಂ ಮತ್ತು ತೆಲಂಗಾಣ ರಾಜ್ಯಗಳ ತಲಾ ಒಂದು ವಿಧಾನಸಭಾ ಸ್ಥಾನಕ್ಕೆ ಚುನಾವಣೆ ನಡೆದಿತ್ತು.
ಕೇಂದ್ರಾಡಳಿತ ಪ್ರದೇಶ ದಾದ್ರಾ ಮತ್ತು ನಗರ್ ಹವೇಲಿ, ಹಿಮಾಚಲ ಪ್ರದೇಶದ ಮಂಡಿ ಮತ್ತು ಮಧ್ಯಪ್ರದೇಶದ ಖಾಂಡ್ವಾ ಲೋಕಸಭಾ ಕ್ಷೇತ್ರಗಳ ಸಂಸದರು ಮೃತಪಟ್ಟ ಕಾರಣ ಅಲ್ಲಿ ಚುನಾವಣೆ ನಡೆದಿತ್ತು.
ಮಂಡಿಯಲ್ಲಿ ಪ್ರತಿಭಾ ಸಿಂಗ್ ಅವರು ಕಾರ್ಗಿಲ್ ಯುದ್ಧ ವೀರ, ಬಿಜೆಪಿ ಅಭ್ಯರ್ಥಿ ಖುಶಾಲ್ ಸಿಂಗ್ ಠಾಕೂರ್ ವಿರುದ್ಧ ಸ್ಪರ್ಧಿಸಿದ್ದಾರೆ. ದಾದ್ರಾ ಮತ್ತು ನಗರ್ ಹವೇಲಿಯಲ್ಲಿ, ಏಳು ಬಾರಿ ಸ್ವತಂತ್ರ ಸಂಸದ ಮೋಹನ್ ದೇಲ್ಕರ್ ಅವರ ಪತ್ನಿ ಕಲಾಬೆನ್ ದೇಲ್ಕರ್ ಅವರು ಬಿಜೆಪಿಯ ಮಹೇಶ್ ಗವಿತ್ ಮತ್ತು ಕಾಂಗ್ರೆಸ್‌ನ ಮಹೇಶ್ ಧೋಡಿ ವಿರುದ್ಧ ಶಿವಸೇನಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.