ಸೋಮವಾರ, ಸೆಪ್ಟೆಂಬರ್ 26, 2022
21 °C

2024ರ ಅಂತ್ಯದವರೆಗೆ ಪಿಎಂಎವೈ–ಯು ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಧಾನ ಮಂತ್ರಿ ಆವಾಸ್‌ ಯೋಜನೆ(ನಗರ)ಯನ್ನು (ಪಿಎಂಎವೈ–ಯು) 2024ರ ಡಿಸೆಂಬರ್ 31ರ ವರೆಗೆ ಮುಂದುವರಿಸಲು ಕೇಂದ್ರ ಸರ್ಕಾರ ಬುಧವಾರ ನಿರ್ಧರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಕಳೆದ ಮಾರ್ಚ್ 31ಕ್ಕೆ ಅಂತ್ಯಗೊಂಡ ಅವಧಿಯಲ್ಲಿ ಒಟ್ಟು 122.69 ಲಕ್ಷ ಮನೆಗಳಿಗೆ ಮಂಜೂರಾತಿ ನೀಡಲಾಗಿದೆ. ಈ ಮನೆಗಳನ್ನು ಪೂರ್ಣಗೊಳಿಸಲು ಹಣಕಾಸು ನೆರವು ನೀಡಲು ಸಹ ಸಭೆ ನಿರ್ಧರಿಸಿದೆ ಎಂದು ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಯೋಜನೆಯ ಅವಧಿಯನ್ನು ವಿಸ್ತರಿಸುವಂತೆ ಹಲವು ರಾಜ್ಯಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು