ಗುರುವಾರ , ಸೆಪ್ಟೆಂಬರ್ 23, 2021
22 °C

ನಾಗ್ಪುರ ಎನ್‌ಡಿಆರ್‌ಎಫ್ ಅಕಾಡೆಮಿಗೆ ನಿರ್ದೇಶಕರ ಹುದ್ದೆ: ಕೇಂದ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನಾಗ್ಪುರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ಅಕಾಡೆಮಿಯಲ್ಲಿ ನಿರ್ದೇಶಕರ ಹುದ್ದೆ ರಚನೆಗೆ ಸರ್ಕಾರ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಹಿರಿಯ ಆಡಳಿತ ಅಧಿಕಾರಿ ದರ್ಜೆಯ (ಎಸ್‌ಎಜಿ) ಹುದ್ದೆಯನ್ನು ರಚಿಸಲು ಅನುಮೋದನೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಹುದ್ದೆ ಸೃಷ್ಟಿಸುವುದರ ಮೂಲಕ ಎನ್‌ಡಿಆರ್‌ಎಫ್‌ ಅಕಾಡೆಮಿಯ ನಿಯಂತ್ರಣವನ್ನು ಹಿರಿಯ ಮತ್ತು ಅನುಭವಿ ಅಧಿಕಾರಿಗೆ ವಹಿಸಲಾಗುವುದು ಎಂದು ಪ್ರಕಟಣೆ ಹೇಳಿದೆ.

ಅಕಾಡೆಮಿಯು ವರ್ಷಕ್ಕೆ 5,000ಕ್ಕೂ ಹೆಚ್ಚು ಸಿಬ್ಬಂದಿಗೆ ಕೌಶಲ ಆಧಾರಿತ ಪ್ರಾಯೋಗಿಕ ತರಬೇತಿಯನ್ನು ನೀಡುತ್ತಿದೆ. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ‘ಸಾರ್ಕ್‌’ ದೇಶಗಳು ಮತ್ತು ಇತರ ದೇಶಗಳ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಗೆ ಇಲ್ಲಿ ತರಬೇತಿ ನೀಡಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು