ಭಾರತಕ್ಕೆ ’ಜಿ–20‘ ಅಧ್ಯಕ್ಷ ಸ್ಥಾನ: ಸಚಿವಾಲಯ ಸ್ಥಾಪನೆಗೆ ಅಸ್ತು

ನವದೆಹಲಿ: ಭಾರತ ‘ಜಿ–20’ ಯ ಅಧ್ಯಕ್ಷ ಸ್ಥಾನ ಅಲಂಕರಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳಿಗೆ ಸಂಬಂಧಿಸಿ ಸಚಿವಾಲಯ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿತು.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟದ ಸಭೆಯಲ್ಲಿ ಈ ಅನುಮೋದನೆ ನೀಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.
20 ರಾಷ್ಟ್ರಗಳ ಸಂಘಟನೆಯಾದ ‘ಜಿ–20’ ಅಧ್ಯಕ್ಷ ಸ್ಥಾನವನ್ನು ಇದೇ ವರ್ಷ ಡಿಸೆಂಬರ್ 1ರಂದು ಭಾರತ ಅಲಂಕರಿಸಲಿದ್ದು, 2023ರ ನವೆಂಬರ್ 30ರ ವರೆಗೆ ಅಧಿಕಾರಾವಧಿ ಇರಲಿದೆ. ಮುಂದಿನ ವರ್ಷ ಭಾರತವು ಜಿ–20 ಶೃಂಗಸಭೆಯನ್ನು ಆಯೋಜಿಸಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.