ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಜೆ 6ಕ್ಕೆ ಕೇಂದ್ರದ ಸಚಿವ ಸಂಪುಟ ಪುನರ್‌ರಚನೆ: 43 ಮಂದಿ ಪ್ರಮಾಣವಚನ ಸಾಧ್ಯತೆ

Last Updated 7 ಜುಲೈ 2021, 10:16 IST
ಅಕ್ಷರ ಗಾತ್ರ

ನವದೆಹಲಿ: ಬಹುನಿರೀಕ್ಷಿತ ಕೇಂದ್ರ ಸರ್ಕಾರದ ಸಚಿವ ಸಂಪುಟ ಪುನರ್ರಚನೆ ಇಂದು ಸಂಜೆ 6 ಗಂಟೆಗೆ ರಾಷ್ಟ್ರಪತಿ ಭವನದಲ್ಲಿನಡೆಯಲಿದೆ. ಸಂಭಾವ್ಯ ಸಚಿವರು ಪ್ರಧಾನಿ ನರೇಂದ್ರಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 43 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಪಿಟಿಐ ವರದಿ ಮಾಡಿದೆ.

ನಾರಾಯಣ್ ರಾಣೆ, ಸರ್ಬಾನಂದ ಸೋನೊವಾಲ್, ಜ್ಯೋತಿರಾದಿತ್ಯ ಸಿಂಧಿಯಾ, ಅಜಯ್ ಭಟ್, ಭೂಪೇಂದರ್ ಯಾದವ್, ಶೋಭಾ ಕರಂದ್ಲಾಜೆ, ಸುನೀತಾ ದುಗ್ಗಲ್, ಮೀನಾಕ್ಷಿ ಲೇಖಿ, ಭಾರತಿ ಪವಾರ್, ಶಂತನು ಠಾಕೂರ್ ಮತ್ತು ಕಪಿಲ್ ಪಾಟೀಲ್ ಮತ್ತು ಅಪ್ನಾ ದಳದ ಅನುಪ್ರಿಯಾ ಪಟೇಲ್. ಜೆಡಿಯುನ ಆರ್‌ಸಿಪಿ ಸಿಂಗ್, ಎಲ್‌ಜೆಪಿಯ ಪಶುಪತಿ ಪಾರಸ್ ಅವರು ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ.

ರಾಜ್ಯ ಸಚಿವರಾದ ಜಿ ಕಿಶನ್ ರೆಡ್ಡಿ, ಪುರುಷೋತ್ತಮ್ ರೂಪಾಲ ಮತ್ತು ಅನುರಾಗ್ ಠಾಕೂರ್ ಮತ್ತಿತರರು ಪ್ರಧಾನಿಯನ್ನು ಭೇಟಿ ಮಾಡಿದ್ದು, ಅವರಿಗೂ ಕ್ಯಾಬಿನೆಟ್ ದರ್ಜೆಗೆ ಬಡ್ತಿ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಡ್ತಿ ಪಡೆಯುವವರು ಸೇರಿದಂತೆ ಸುಮಾರು 43 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬಹುದು. ಯುವಕರು ಮತ್ತು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಆಡಳಿತಾತ್ಮಕ ಅನುಭವ ಹೊಂದಿರುವವರ ಮಿಶ್ರಣವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಚಿವರಾದ ಆರ್ ಕೆ ಸಿಂಗ್, ಮನ್ಸುಖ್ ಮಾಂಡವಿಯಾ ಮತ್ತು ಹರ್ದೀಪ್ ಸಿಂಗ್ ಪುರಿ ಅವರು ಸಹ ಬಡ್ತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಭಾವ್ಯ ಸಚಿವರು ಪ್ರಧಾನಿಯವರನ್ನು ಭೇಟಿ ಮಾಡಿದ ಸಂದರ್ಭ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸಹ ಉಪಸ್ಥಿತರಿದ್ದರು.

2019 ರ ಮೇನಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮಂತ್ರಿ ಮಂಡಲದಲ್ಲಿ ನಡೆಯುತ್ತಿರುವ ಮೊದಲ ಪುನರ್‌ ರಚನೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT