ಭಾನುವಾರ, ಮೇ 29, 2022
30 °C
ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಸಫಾಯಿ ಕರ್ಮಚಾರಿಗಳ ಆಯೋಗದ ಅಧಿಕಾರಾವಧಿ 2025ರವರೆಗೆ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ (ಎನ್‌ಸಿಎಸ್‌ಕೆ) ಅಧಿಕಾರಾವಧಿಯನ್ನು 2025ರ ಮಾರ್ಚ್ 31ರ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿತು.

‘ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಆಯೋಗದ ಅಧಿಕಾರಾವಧಿಯನ್ನು ಮೂರು ವರ್ಷಗಳ ಕಾಲ ವಿಸ್ತರಿಸುವ ನಿರ್ಧಾರ ಕೈಗೊಂಡಿತು’ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

1994ರ ಆಗಸ್ಟ್‌ 12ರಂದು ಆಯೋಗವನ್ನು ರಚಿಸಲಾಯಿತು. ಕಾಲಕಾಲಕ್ಕೆ ಆಯೋಗದ ಅಧಿಕಾರಾವಧಿಯನ್ನು ವಿಸ್ತರಿಸಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು