ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನ ಮಂತ್ರಿ ಆವಾಸ್‌ ಯೋಜನೆ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

Last Updated 8 ಡಿಸೆಂಬರ್ 2021, 13:46 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್‌ ಯೋಜನೆಯನ್ನು (ಗ್ರಾಮೀಣ) ಇನ್ನೂ ಮೂರು ವರ್ಷಗಳವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟವು ಬುಧವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ ಈ ಯೋಜನೆಯನ್ನು ಮಾರ್ಚ್‌ 2021 ರಿಂದ 2024ರ ಮಾರ್ಚ್‌ ತನಕ ವಿಸ್ತರಿಸಲಾಗಿದೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ವಸತಿಯನ್ನು ನಿರ್ಮಿಸಲಾಗುವುದು’ ಎಂದು ಹೇಳಿದರು.

‘ಈ ವಿಸ್ತರಣೆಯು 155.75 ಲಕ್ಷ ಮನೆಗಳನ್ನು ನಿರ್ಮಿಸಲು ಸಹಾಯವಾಗಲಿದೆ’ ಎಂದು ಸರ್ಕಾರಿ ವಕ್ತಾರರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT