ಭಾನುವಾರ, ಏಪ್ರಿಲ್ 2, 2023
33 °C

ದೆಹಲಿ-ಪುಣೆ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ 

ಪಿಟಿಐ Updated:

ಅಕ್ಷರ ಗಾತ್ರ : | |

  ದೆಹಲಿ-ಪುಣೆ ಸ್ಪೈಸ್ ಜೆಟ್ ವಿಮಾನ ಗುರುವಾರ ಟೇಕಾಫ್ ಆಗುವ ಮೊದಲು ಬಾಂಬ್ ಇರುವ ಬಗ್ಗೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ವಿಮಾನವನ್ನು ಪರಿಶೀಲಿಸಲಾಗುತ್ತಿದೆ. ಕರೆ ಬಂದಾಗ ಪ್ರಯಾಣಿಕರು ಬೋರ್ಡಿಂಗ್ ಗೇಟ್ ನಲ್ಲಿದ್ದರು ಮತ್ತು ವಿಮಾನದ ಒಳಗೆ ಇರಲಿಲ್ಲ ಎಂದು ಅವರು ಹೇಳಿದರು.

ಎಸ್‌ಜಿ 8938 ವಿಮಾನದ ನಿರ್ಗಮನ ಸಮಯ ಸಂಜೆ 5.35 ಆಗಿತ್ತು ಎಂದು ಮೂಲಗಳು ತಿಳಿಸಿವೆ.

‘ಸಿಐಎಸ್ಎಫ್ ಮತ್ತು ದೆಹಲಿ ಪೊಲೀಸ್‌ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ವಿಮಾನದಲ್ಲಿ ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತು ಕಂಡು ಬಂದಿಲ್ಲ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕರೆ ಮಾಡಿದವನನ್ನು ಪತ್ತೆ ಹಚ್ಚಲು ಹಾಗೂ ಅದು ಹುಸಿ ಕರೆಯೇ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು