ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ತಾಯಿಯ ವಿರುದ್ಧ ಬಿಬಿಸಿ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಪದ ಬಳಕೆ

Last Updated 3 ಮಾರ್ಚ್ 2021, 16:21 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಸಿ ಏಷ್ಯನ್ ನೆಟ್‌ವರ್ಕ್‌ನ ಬಿಗ್ ಡಿಬೇಟ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ತಾಯಿಯ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದು, ವಿವಾದಕ್ಕೆ ಕಾರಣವಾಗಿದೆ.

ಅಲ್ಲದೆ, ಸಾಮಾಜಿಕ ತಾಣಗಳಲ್ಲೂ ಬಿಬಿಸಿ ಶೋ ವಿರುದ್ಧ ತೀವ್ರ ಆಕ್ಷೇಪ ಕೇಳಿಬಂದಿದ್ದು, #BoycottBBC ಎನ್ನುವ ಹ್ಯಾಶ್‌ಟ್ಯಾಗ್ ಕೂಡ ಟ್ರೆಂಡ್ ಆಗಿದೆ. ಬಹುತೇಕರು ಬಿಬಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕ್ರಮ ಪ್ರಸಾರ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ಬಿಬಿಸಿ ಸೌಂಡ್ಸ್‌ನಲ್ಲಿ ಪ್ರಿಯಾ ರೈ ನಡೆಸಿಕೊಡುವ ಬಿಗ್ ಡಿಬೇಟ್ ಕಾರ್ಯಕ್ರಮದಲ್ಲಿ ಈ ಬಾರಿ ರೈತರ ಪ್ರತಿಭಟನೆ ವಿಚಾರವಾಗಿ ಕೇಳುಗರ ಅಭಿಪ್ರಾಯ ಪಡೆಯುತ್ತಿದ್ದ ಸಂದರ್ಭ ಓರ್ವ ವ್ಯಕ್ತಿ ಕರೆ ಮಾಡಿ, ಪ್ರಧಾನಿ ನರೇಂದ್ರ ಮೋದಿ ತಾಯಿಯ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾನೆ.

ಈ ಸಂಗತಿ ವಿವಾದಕ್ಕೆ ಕಾರಣವಾಗುತ್ತಲೇ ಬಾಯ್ಕಟ್ ಬಿಬಿಸಿ ಟ್ವಿಟರ್ ಟ್ರೆಂಡ್ ಆಗಿದ್ದು, ಬಳಿಕ ಸಂಸ್ಥೆ ಆಕ್ಷೇಪಾರ್ಹ ಪದಗಳನ್ನು ತೆಗೆದುಹಾಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT