ಮುಂಬೈ: ಕೋವಿಡ್ ಹಿನ್ನೆಲೆಯಲ್ಲಿ ಪಂಚ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯ ಬಹಿರಂಗ ಪ್ರಚಾರ ಹಾಗೂ ರೋಡ್ ಶೋಗಳನ್ನು ಜನವರಿ 15ರವರೆಗೆ ನಿರ್ಬಂಧಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶೀವಸೇನಾ ಸಂಸದ ಸಂಜಯ್ ರಾವುತ್, 'ಪ್ರಚಾರದ ಮೇಲೆ ನಿರ್ಬಂಧ ಹೇರಿರುವುದು ಎಲ್ಲರಿಗೂ ಒಂದೇ ರೀತಿ ಅನ್ವಯಿಸಬೇಕು. ಪ್ರಧಾನಿ ನರೇಂದ್ರ ಮೋದಿ ಮಾದರಿಯಾಗಬೇಕು' ಎಂದು ಹೇಳಿದ್ದಾರೆ.

ಇದನ್ನೂ ಓದಿ:Explainer | ಪಂಚ ರಾಜ್ಯಗಳ ಚುನಾವಣೆ 2022; ಐದು ರಾಜ್ಯಗಳಲ್ಲಿ ಪಕ್ಷಗಳ ಬಲಾಬಲ

'ಪಶ್ಚಿಮ ಬಂಗಾಳದ ಚುನಾವಣೆ ಸಮಯದಲ್ಲಿ ಕೋವಿಡ್ ಎರಡನೇ ಅಲೆ ಉತ್ತುಂಗದಲ್ಲಿತ್ತು. ಕೆಲವು ಪಕ್ಷಗಳ ನಾಯಕರು ವಿಶೇಷವಾಗಿ ಬಿಜೆಪಿ ಹಾಗೂ ಪ್ರಧಾನಿ ಮೋದಿ ಹೇಗೆ ಪ್ರಚಾರ ನಡೆಸಿದ್ದಾರೆ ಎಂಬುದನ್ನು ನಾವೆಲ್ಲ ನೋಡಿದ್ದೇವೆ. ಆದರೆ ಈ ಬಾರಿ ಪ್ರಧಾನಿ ಮಾದರಿ ಆಗಬೇಕು' ಎಂದು ಹೇಳಿದರು.

ಉತ್ತರ ಪ್ರದೇಶ ಹಾಗೂ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಶಿವಸೇನಾ ಸ್ಪರ್ಧಿಸುವುದಾಗಿಯೂ ಖಚಿತಪಡಿಸಿದರು.

'ಗೋವಾದಲ್ಲಿ ಶಿವಸೇನಾ-ಎನ್ಸಿಪಿ ಜೊತೆಯಾಗಿ ಸ್ಪರ್ಧಿಸಲಿದ್ದೇವೆ. ಕಾಂಗ್ರೆಸ್ ಕೂಡ ನಮ್ಮ ಜೊತೆಗಿರಲು ಬಯಸುತ್ತೇವೆ. ಆದರೆ ಸೀಟು ಹಂಚಿಕೆ ಸಮಸ್ಯೆಯಿದೆ. ಗೋವಾದಲ್ಲಿ ಸ್ವಂತ ಬಲದಲ್ಲಿ ಗೆಲ್ಲಬಹುದು ಎಂದು ಕಾಂಗ್ರೆಸ್ ಭಾವಿಸಿದ್ದರೆ ಅವರಿಗೆ ನಮ್ಮ ಶುಭಕಾಮನೆಗಳು' ಎಂದರು.

'ಗೋವಾದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲು ಬಯಸುತ್ತಾರೆ. ಆದರೆ ವಿರೋಧ ಪಕ್ಷಗಳ ಒಗ್ಗಟ್ಟಿನ ಕೊರತೆಯಿಂದಾಗಿ ಅವಕಾಶ ದೊರೆತಿದೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.