ಪಂಚ ರಾಜ್ಯಗಳಿಗೆ ಚುನಾವಣೆ; ಆನ್ಲೈನ್ ಮೂಲಕ ನಾಮಪತ್ರ ಸಲ್ಲಿಸಬಹುದು!

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯ/ಕೇಂದ್ರಡಾಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ದಿನಾಂಕಗಳ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ.
ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆಯು ವಿಭಿನ್ನತೆಗಳಿಂದ ಕೂಡಿರಲಿದ್ದು, ಹಲವು ನಾವೀನ್ಯತೆಗಳಿಗೆ ಪಾತ್ರವಾಗಿದೆ.
ಇವುಗಳ ಪೈಕಿ ಈ ಬಾರಿ ಅಭ್ಯರ್ಥಿಗಳು ನಾಮಪತ್ರಗಳನ್ನು ಆನ್ಲೈನ್ ಮೂಲಕವೂ ಸಲ್ಲಿಸಹುದಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: 4 ರಾಜ್ಯ, 1 ಕೇಂದ್ರಾಡಳಿತ ಚುನಾವಣೆ: ಮಾ. 27ರಿಂದ ಮತದಾನ, ಮೇ 2ರಂದು ಮತ ಎಣಿಕೆ
ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳು ಆನ್ಲೈನ್ನಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಕೋವಿಡ್-19 ಸುರಕ್ಷತಾ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಒಂದು ತಾಸು ಹೆಚ್ಚುವರಿ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದವರು ವಿವರಿಸಿದರು.
ಅಭ್ಯರ್ಥಿಗಳು ಚುನಾವಣಾ ಆಯೋಗ ಸಿದ್ಧಪಡಿಸಿದ ಸುವಿಧಾ ವೆಬ್ಸೈಟ್ ಮೂಲಕ ಇ-ನಾಮಪತ್ರವನ್ನು ಸಲ್ಲಿಸಬಹುದಾಗಿದೆ.
ಒಟ್ಟು 824 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 2.7 ಲಕ್ಷ ಮತಗಟ್ಟೆಗಳಲ್ಲಿ 18.68 ಕೋಟಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.