ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಕಾರಣದಿಂದ ಸಿ.ಎ ಪರೀಕ್ಷೆ ಬರೆಯದಿದ್ದ ಅಭ್ಯರ್ಥಿಗಳಿಗೆ ಮತ್ತೆ ಅವಕಾಶ

Last Updated 9 ಸೆಪ್ಟೆಂಬರ್ 2021, 11:53 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಕಾರಣದಿಂದ ಕಳೆದ ಜುಲೈ ತಿಂಗಳು ಸಿ.ಎ ಪರೀಕ್ಷೆಗೆ ಹಾಜರಾಗದಿದ್ದ ಅಭ್ಯರ್ಥಿಗಳು ಅವಕಾಶ ವಂಚಿತರಾಗುವುದಿಲ್ಲ ಎಂದು ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು (ಐಸಿಎಐ) ಗುರುವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಅವಕಾಶ ವಂಚಿತರಿಗೆ ಪರೀಕ್ಷೆ ನಡೆಸಲು ಸಂಸ್ಥೆಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್‌, ‘ಅಭ್ಯರ್ಥಿಗಳು ಈ ಬಗ್ಗೆ ಐಸಿಎಐಗೆ ಮನವಿ ಸಲ್ಲಿಸಬೇಕು‘ ಎಂದು ಸೂಚಿಸಿತು.

ಐಸಿಎಐ ಪ್ರತಿನಿಧಿಸಿದ್ದ ಹಿರಿಯ ವಕೀಲ ರಾಮ್‌ಜಿ ಶ್ರೀನಿವಾಸನ್‌ ಅವರು, ಐಸಿಎಐ ಈ ಕುರಿತು ಎರಡು ವಾರದಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ನ್ಯಾಯಮೂರ್ತಿ ಎ.ಎಂ.ಖಾನ್‌ವಿಲ್ಕರ್ ನೇತೃತ್ವದ ಪೀಠಕ್ಕೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT