ಭಾನುವಾರ, ಏಪ್ರಿಲ್ 2, 2023
23 °C

ಅಶ್ಲೀಲ ವಿಡಿಯೊ; ಸೂಕ್ತ ಆದೇಶವಿಲ್ಲದೆ ಕ್ರಮ ಕೈಗೊಳ್ಳಲಾಗದು: ವಾಟ್ಸ್‌ಆ್ಯಪ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ನ್ಯಾಯಾಂಗದ ಅಧಿಕಾರಿಯೊಬ್ಬರು ಮಹಿಳೆಯೊಂದಿಗೆ ಇರುವ ಅಶ್ಲೀಲ ವಿಡಿಯೊವೊಂದು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿದ್ದು, ಈ ಸಂಬಂಧ ಸೂಕ್ತ ಆದೇಶ ಹೊರಡಿಸದ ಹೊರತು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ’ ಎಂದು ವಾಟ್ಸ್‌ಆ್ಯಪ್‌ ಕಂಪನಿಯು ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯೊಂದನ್ನು ನ್ಯಾಯಮೂರ್ತಿ ಯಶವಂತ್‌ ವರ್ಮಾ ವಿಚಾರಣೆ ನಡೆಸಿದರು.

‘ನಾವು ಯಾವ ಕೆಲಸವನ್ನು ಮಾಡಲು ಸಾಧ್ಯವಿಲ್ಲವೊ ಆ ಕೆಲಸ ಮಾಡಬೇಕೆಂದು ಅರ್ಜಿದಾರರು ನಿರೀಕ್ಷಿಸುತ್ತಿದ್ದಾರೆ. ಸೂಕ್ತ ಮೊಬೈಲ್‌ ಸಂಖ್ಯೆಗಳನ್ನು ಒದಗಿಸದಿದ್ದರೆ ಆರೋಪಿಗಳ ವಿರುದ್ಧ ನಾವು ಯಾವ ಕ್ರಮವನ್ನೂ ಕೈಗೊಳ್ಳಲು ಆಗುವುದಿಲ್ಲ. ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಹೀಗಾಗಿ ನ್ಯಾಯಾಲಯವೇ ಏನಾದರೂ ಕ್ರಮ ತೆಗೆದುಕೊಳ್ಳಬೇಕು’ ಎಂದು ವಾಟ್ಸ್‌ಆ್ಯಪ್‌ ಕಂಪನಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಕಪಿಲ್‌ ಸಿಬಲ್‌ ಅವರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು