ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್: ಬಿಜೆಪಿಯಲ್ಲಿ ಅಮರಿಂದರ್ ಪಕ್ಷ ವಿಲೀನ?

Last Updated 2 ಜುಲೈ 2022, 10:30 IST
ಅಕ್ಷರ ಗಾತ್ರ

ಚಂಡೀಗಡ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಹೊಸ ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷವು (ಪಿಎಲ್‌ಸಿ) ಭಾರತೀಯ ಜನತಾ ಪಕ್ಷದಲ್ಲಿ (ಬಿಜೆಪಿ) ವಿಲೀನವಾಗಲಿದೆ ಎಂದು ವರದಿಯಾಗಿದೆ.

ಲಂಡನ್‌ನಲ್ಲಿ ಬೆನ್ನುಮೂಳೆ ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿರುವ ಅಮರಿಂದರ್ ಸಿಂಗ್, ಪಂಜಾಬ್‌ಗೆ ಹಿಂತಿರುಗಿದ ಬಳಿಕ ಈ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಪಿಎಲ್‌ಸಿ ನಾಯಕ ಹರ್‌ಜಿತ್ ಸಿಂಗ್ ತಿಳಿಸಿದ್ದಾರೆ.

ಲಂಡನ್‌ಗೆ ತೆರಳುವ ಮುನ್ನ ಬಿಜೆಪಿಗೆ ಸೇರುವ ಅಮರಿಂದರ್ ಇಂಗಿತವನ್ನು ವ್ಯಕ್ತಪಡಿಸಿದ್ದರು ಎಂದು ಅವರು ಹೇಳಿದ್ದಾರೆ.

ಆದರೆ ಈ ಕುರಿತು ಪಕ್ಷದಿಂದ ಅಧಿಕೃತ ಪ್ರಕಟಣೆ ಬಂದಿಲ್ಲ.

ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹದ ಕಾರಣ ಸಿಎಂ ಸ್ಥಾನ ತ್ಯಜಿಸಿದ್ದ ಅಮರಿಂದರ್, ಕಾಂಗ್ರೆಸ್ ಪಕ್ಷ ತೊರೆದು ಪಿಎಲ್‌ಸಿ ಎಂಬ ನೂತನ ಪಕ್ಷ ಕಟ್ಟಿದ್ದರು.

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿರೋಮಣಿ ಅಕಾಲಿದಳ (ಸಂಯುಕ್ತ) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರು.

ಆದರೆ ಅಮರಿಂದರ್ ಸೇರಿದಂತೆ ಪಕ್ಷದ ಯಾವುದೇ ಅಭ್ಯರ್ಥಿ ವಿಜಯ ಗಳಿಸಲು ಯಶಸ್ವಿಯಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT