ಸೋಮವಾರ, ಜುಲೈ 4, 2022
25 °C

ಸಚಿನ್ ವಾಜೆ ಕಾರನ್ನು ಶಿವಸೇನಾ ಶಾಸಕರ ಕಚೇರಿ ಹೊರಗೆ ನಿಲ್ಲಿಸಲಾಗಿತ್ತು: ಬಿಜೆಪಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಎನ್‌ಐಎ ತನಿಖೆ ನಡೆಸುತ್ತಿರುವ ‘ಸ್ಕಾರ್ಪಿಯೊ ವಾಹನದಲ್ಲಿ ಸ್ಪೋಟಕಗಳು ತುಂಬಿದ್ದ ಪ್ರಕರಣದಲ್ಲಿ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಸಿದ ಐಷಾರಾಮಿ ಕಾರುಗಳಲ್ಲಿ ಒಂದನ್ನು ಶಿವಸೇನಾ ಶಾಸಕರೊಬ್ಬರ ಕಚೇರಿಯ ಹೊರಗೆ ನಿಲ್ಲಿಸಲಾಗಿತ್ತು ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಗುರುವಾರ ಆರೋಪಿಸಿದ್ದಾರೆ.

ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಬಳಿ ಸ್ಫೋಟಕ ತುಂಬಿದ್ದ ವಾಹನವನ್ನು ಇರಿಸುವಲ್ಲಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ಎನ್ಐಎ, ಎರಡು ಮರ್ಸಿಡಿಸ್ ಕಾರುಗಳು ಸೇರಿದಂತೆ ಒಟ್ಟು ಐದು ವಾಹನಗಳನ್ನು ವಶಪಡಿಸಿಕೊಂಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾಣೆ, ವಾಜೆ ಅವರನ್ನು ಎನ್ಐಎ ಬಂಧಿಸಿದ ದಿನ, ಅವರು ಬಳಸಿದ ಮರ್ಸಿಡಿಸ್ ಕಾರುಗಳಲ್ಲಿ ಒಂದನ್ನು ಶಿವಸೇನಾದ ಶಾಸಕರ ಕಚೇರಿಯ ಹೊರಗೆ ನಿಲ್ಲಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

'ಸಂಜಯ್ ರಾವುತ್ ಅವರು ರಾಜಕೀಯದಲ್ಲಿ ಪ್ರತಿಯೊಬ್ಬರೂ ಏನನ್ನಾದರೂ ಮರೆಮಾಚಲು ಹೊಂದಿರುತ್ತಾರೆ ಎಂದು ಹೇಳಿದ್ದಾರೆ. ಹಾಗಿದ್ದರೆ ಅವರು ಕೂಡ ಏನನ್ನಾದರೂ ಮರೆಮಾಚಲು ಏನನ್ನಾದರು ಹೊಂದಿರಬಹುದೆಂದು ನಾನು ಅವರಿಗೆ ಹೇಳಲು ಬಯಸುತ್ತೇನೆ, ಆದರೆ ಅದು ನಮ್ಮ ವಿಚಾರವಲ್ಲ. ಈ ಪ್ರಕರಣದಲ್ಲಿ ಸತ್ಯ ಹೊರಬರಬೇಕು ಎಂದು ನಾವು ಬಯಸುತ್ತೇವೆ,' ಎಂದು ರಾಣೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು