ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಪ್ಟೆಂಬರ್‌ನಲ್ಲಿ ಪರೀಕ್ಷೆ: ನೀಟ್, ಜೆಇಇ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ

Last Updated 17 ಆಗಸ್ಟ್ 2020, 8:06 IST
ಅಕ್ಷರ ಗಾತ್ರ

ನವದೆಹಲಿ: ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರಮಟ್ಟದಲ್ಲಿ ನಡೆಯುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗಳು (ನೀಟ್‌) ನಿಗದಿತ ದಿನಗಳಂದು ನಡೆಯಲಿವೆ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ತಿಳಿಸಿದೆ.

ಕೊರೊನಾ ವೈರಸ್‌ ಪರಿಣಾಮ ನೀಟ್‌, ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪರೀಕ್ಷೆ ಮುಂದೂಡುವಂತೆ 11 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರುಣ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಪರೀಕ್ಷೆ ಮುಂದೂಡಲು ನಿರಾಕರಿಸಿದೆ.

ನಿಗದಿಯಂತೆ ಸೆಪ್ಟೆಂಬರ್‌ ತಿಂಗಳಲ್ಲಿ ನೀಟ್‌, ಜೆಇಇ ಪರೀಕ್ಷೆಗಳು ನಡೆಯಲಿವೆ ಎಂದು ತ್ರಿಸದಸ್ಯ ಪೀಠ ತಿಳಿಸಿದೆ. ಯುವ ಜನರ ಬದುಕನ್ನು ಸಂಕಷ್ಟಕ್ಕೆಸಿಲುಕಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT