ಬುಧವಾರ, ಡಿಸೆಂಬರ್ 2, 2020
17 °C

ಮಧ್ಯಪ್ರದೇಶ ಮುಖ್ಯಮಂತ್ರಿ ರೋಡ್‌ ಶೋ ವೇಳೆ ಕೋವಿಡ್‌ ನಿಯಮ ಉಲ್ಲಂಘನೆ: ಎಫ್‌ಐಆರ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಂದೋರ್‌: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ನಡೆಸಿದ ರೋಡ್‌ ಶೋ ವೇಳೆ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ಉಪಚುನಾವಣೆಯು ನ.3 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಇಂದೋರ್‌ನ ಸನ್ವೇರ್‌ ಪ್ರಾಂತ್ಯದಲ್ಲಿ ರೋಡ್‌ ಶೋ ನಡೆಸಿದರು. ಈ ವೇಳೆ ಕೋವಿಡ್‌ ಮಾರ್ಗಸೂಚಿಯನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದಡಿ ಸ್ಥಳೀಯ ಬಿಜೆಪಿ ನಾಯಕರೊಬ್ಬರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಕೆಲವೊಂದು ಷರತ್ತಿನಡಿ ರೋಡ್‌ ಶೋ ನಡೆಸಲು ಅನುಮತಿಯನ್ನು ನೀಡಲಾಗಿತ್ತು. ರೋಡ್‌ ಶೋ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿತ್ತು. ಅಲ್ಲದೇ ಕೇವಲ ಐದು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿತ್ತು’ ಎಂದು ಸನ್ವೇರ ಪೊಲೀಸ್‌ ಠಾಣೆಯ ಅಧಿಕಾರಿ ಸಂತೋಷ್‌ ಕುಮಾರ್‌ ದುದಿ ಅವರು ಹೇಳಿದರು.

‘ರೋಡ್‌ ಶೋ ವೇಳೆ 20 ರಿಂದ 25 ವಾಹನಗಳಿದ್ದವು. ಈ ವೇಳೆ ಸಾಮಾಜಿಕ ಅಂತರವನ್ನು ಪಾಲಿಸಿಲ್ಲ. ಅಲ್ಲದೇ ಹಲವರು ಮುಖಗವಸನ್ನು ಕೂಡ ಧರಿಸಿಲ್ಲ ಎಂದು ಚುನಾವಣಾಧಿಕಾರಿ ಪತ್ರದಲ್ಲಿ ಹೇಳಿದ್ಧಾರೆ. ಹಾಗಾಗಿ ರೋಡ್‌ ಶೋಗೆ ಅನುಮತಿ ಪಡೆದ ದಿನೇಶ್‌ ಬನ್ಸವಾರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು