ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ನಿಯಮ ಉಲ್ಲಂಘನೆ: ಮುಂಬೈ ಕಾಂಗ್ರೆಸ್ ಅಧ್ಯಕ್ಷ, ಇತರರ ವಿರುದ್ಧ ಎಫ್‌ಐಆರ್

Last Updated 13 ಜೂನ್ 2021, 14:00 IST
ಅಕ್ಷರ ಗಾತ್ರ

ಮುಂಬೈ: ಇಂಧನ ಬೆಲೆ ಏರಿಕೆ ವಿರುದ್ಧ ಗೋರೆಗಾಂವ್‌ನ ಉಪನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಅಲಿಯಾಸ್ 'ಭಾಯ್' ಜಗ್ತಾಪ್ ಮತ್ತು 50 ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಭಾನುವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಜಗ್ತಾಪ್ ಮತ್ತು ಇತರರು ಉಪನಗರದ ಎಸ್‌ವಿ ರಸ್ತೆ ಜಂಕ್ಷನ್‌ನಲ್ಲಿ ಶನಿವಾರ ಜಮಾಯಿಸಿದ್ದರು. ಪ್ರತಿಭಟನೆ ವೇಳೆ ಅವರಲ್ಲಿ ಕೆಲವರು ಫೇಸ್ ಮಾಸ್ಕ್ ಕೂಡ ಧರಿಸಿರಲಿಲ್ಲ ಎಂದರು.

ಪ್ರತಿಭಟನೆ ವೇಳೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಸೆಕ್ಷನ್ 188 (ಸಾರ್ವಜನಿಕ ಸೇವಕರ ಆದೇಶವನ್ನು ಧಿಕ್ಕರಿಸುವುದು) ಮತ್ತು 269 (ಸೋಂಕು ಹರಡುವ ಸಾಧ್ಯತೆಯ ನಿರ್ಲಕ್ಷ್ಯ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT