ಶನಿವಾರ, ಡಿಸೆಂಬರ್ 3, 2022
21 °C

ಉನ್ನಾವೊ ಅತ್ಯಾಚಾರ ಪ್ರಕರಣ: ಅಧಿಕಾರಿ ಖುಲಾಸೆ ಇಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಮೊಕದ್ದಮೆಯ ದೋಷಿ, ಬಿಜೆಪಿ ಮಾಜಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ವಿರುದ್ಧ ಅತ್ಯಾಚಾರ ಮೊಕದ್ದಮೆ ದಾಖಲಿಸುವಲ್ಲಿ ವಿಫಲರಾಗಿದ್ದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧದ ದೋಷಾರೋಪವನ್ನು ಹಿಂಪಡೆಯಲು ವಿಶೇಷ ನ್ಯಾಯಾಲಯ ನಿರಾಕರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಉನ್ನಾವೊದಲ್ಲಿ ಈ ಅತ್ಯಾಚಾರ ಪ್ರಕರಣ ನಡೆದಿತ್ತು. ಕುನ್ವಾರ್ ಬಹಾದ್ದೂರ್‌ ಸಿಂಗ್‌ ಅವರು ಆಗ ಉನ್ನಾವೊದ ಸಾಫಿಪುರದಲ್ಲಿ ವೃತ್ತ ನಿರೀಕ್ಷಕರಾಗಿದ್ದಾರೆ. ಅತ್ಯಾಚಾರ ಸಂತ್ರಸ್ತೆ ದೂರು ನೀಡಿದ್ದರೂ ದೂರು ದಾಖಲಿಸದ ಕಾರಣ ಕುನ್ವಾರ್‌ ಅವರ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು. ಅವರ ಇಬ್ಬರು ಸಹಾಯಕ ಅಧಿಕಾರಿಗಳಾದ ಡಿ.ಪಿ. ಶುಕ್ಲಾ ಮತ್ತು ದಿಗ್ವಿಜಯ್‌ ಸಿಂಗ್‌ ಅವರ ಹೆಸರನ್ನು ಆರೋಪಪಟ್ಟಿಯಲ್ಲಿ ಸೇರಿಸಲಾಗಿತ್ತು.

‘ಆರೋಪಿಗಳು ಶಿಕ್ಷಾರ್ಹ ಅಪರಾಧ ಎಸಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಇದೇ ವೇಳೆ, ದೋಷಾರೋಪವನ್ನು ಖುಲಾಸೆಗೊಳಿಸುವಂತೆ ಕೋರಿ ಮೊಕದ್ದಮೆಯ ಮೊದಲ ಆರೋಪಿ ಕುನ್ವಾರ್‌ ಬಹಾದ್ದೂರ್‌ ಸಿಂಗ್‌ ಪರವಾಗಿ ಸಲ್ಲಿಕೆಯಾಗಿರುವ ಅರ್ಜಿಯನ್ನು ತಿರಸ್ಕರಿಸಲಾಗಿದೆ’ ಎಂದು ನ್ಯಾಯಾಲಯ ಹೇಳಿದೆ.

ಮೊಕದ್ದಮೆಯ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಜನವರಿಗೆ ಕಾಯ್ದಿರಿಸಿದೆ. ಆಗ ಕುನ್ವಾರ್‌ ವಿರುದ್ಧ ಕೋರ್ಟ್‌ ಆರೋಪ ಹೊರಿಸಲಿದೆ ಎನ್ನಲಾಗಿದೆ. ಅವರೆಲ್ಲರ ವಿರುದ್ಧ ದೋಷ ಸಾಬೀತಾದರೆ ಅವರಿಗೆ 6 ತಿಂಗಳಿಂದ 2 ವರ್ಷದವರೆಗೆ ಜೈಲುಶಿಕ್ಷೆ ವಿಧಿಸಬಹುದಾಗಿದೆ ಎನ್ನಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.