ಶನಿವಾರ, ಮೇ 21, 2022
23 °C

ಪರಂಬೀರ್‌ ಸಿಂಗ್‌ ಪ್ರಕರಣ: ಸಿಬಿಐಗೆ ದಾಖಲೆ ಹಸ್ತಾಂತರ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಹಲವು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಜಿ ಪೊಲೀಸ್‌ ಕಮಿಷನರ್‌ ಪರಂಬೀರ್‌ ಸಿಂಗ್‌ ಅವರ ವಿಚಾರಣೆ ನಡೆಸುತ್ತಿದ್ದ ಮುಂಬೈ ಪೊಲೀಸರು ತನಿಖೆಯ ಎಲ್ಲಾ ದಾಖಲೆಗಳನ್ನು ಬುಧವಾರ ಸಿಬಿಐಗೆ ಹಸ್ತಾಂತರಿಸಿದ್ದಾರೆ.

ಅಧಿಕಾರ ದುರಪಯೋಗ ಮತ್ತು ಭ್ರಷ್ಟಾಚಾರದ ಅನೇಕ ಪ್ರಕರಣಗಳನ್ನು ಕಳೆದ ತಿಂಗಳು ಸುಪ್ರೀಂ ಕೋರ್ಟ್‌ ಸಿಬಿಐಗೆ ವರ್ಗಾಯಿಸಿದ ಬೆನ್ನಲ್ಲೇ ದಾಖಲೆಗಳ ಹಸ್ತಾಂತರ ನಡೆದಿದೆ. ಐದು ಎಫ್‌ಐಆರ್‌ ಮತ್ತು ಮೂರು ಪ್ರಾಥಮಿಕ ತನಿಖೆಯನ್ನು ಎಲ್ಲಾ ದಾಖಲೆಗಳೊಂದಿಗೆ ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ಪರಂಬೀರ್‌ ಸಿಂಗ್‌ ವಿರುದ್ಧ ಮುಂಬೈ ಮತ್ತು ಠಾಣೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು