ಶನಿವಾರ, ಜನವರಿ 16, 2021
20 °C
ವಿದೇಶಾಂಗ ಸಚಿವ ಶೇಖ್‌ ರಶೀದ್‌ ಅಹ್ಮದ್‌

ಪಾಕ್ ಸೇನೆ ವಿರುದ್ಧ ಹೇಳಿಕೆ: 72 ಗಂಟೆಯೊಳಗೆ ಪ್ರಕರಣ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಪಾಕಿಸ್ತಾನದ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ವ್ಯಕ್ತಿಗಳ ವಿರುದ್ಧ ಎಪ್ಪತ್ತೆರಡು ಗಂಟೆಗಳೊಳಗೆ ಪ್ರಕರಣ ದಾಖಲಿಸಲಾಗುವುದು ಎಂದು ವಿದೇಶಾಂಗ ಸಚಿವ ಶೇಖ್‌ ರಶೀದ್‌ ಅಹ್ಮದ್‌ ಹೇಳಿದ್ದಾರೆ.

‘ಸಶಸ್ತ್ರ ಪಡೆಗಳು ದೇಶವನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದೆ’ ಎಂದು ಪಿಡಿಎಂ ಮುಖ್ಯಸ್ಥ ಮೌಲಾನಾ ಫಜ್ಲೂರ್ ರೆಹಮಾನ್ ಹೇಳಿಕೆ ನೀಡಿದ ಮರುದಿನವೇ ಅವರು ಈ ಎಚ್ಚರಿಕೆ ನೀಡಿದ್ದಾರೆ. 

ಮುಂದಿನ ಪ್ರತಿಭಟನಾ ಮೆರವಣಿಗೆಯನ್ನು ರಾಷ್ಟ್ರ ರಾಜಧಾನಿ ಇಸ್ಲಾಮಾಬಾದ್‌ ಅಥವಾ ರಾವಲ್ಪಿಂಡಿಯಲ್ಲಿರುವ ಸೇನಾ ಪ್ರಧಾನ ಕಚೇರಿಯ ಬಳಿ ನಡೆಸಲಾಗುತ್ತದೆಯೇ ಎಂಬ ಕುರಿತು ಪ್ರತಿಪಕ್ಷಗಳು ಇನ್ನೂ ತೀರ್ಮಾನಿಸಿಲ್ಲ ಎಂದು ಫಜ್ಲೂರ್ ಹೇಳಿದ್ದರು.

ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ಪ್ರತಿಭಟನೆಯನ್ನು ಎದುರಿಸಲು ಸೋಮವಾರದಿಂದ ಸಿದ್ಧತೆ ಪ್ರಾರಂಭಿಸುತ್ತೇವೆ ಎಂದು  ರಶೀದ್‌ ಹೇಳಿದ್ದಾರೆ.

ಸೇನೆಯ ವಿರುದ್ಧ ಹೇಳಿಕೆ ನೀಡಿದ ಜಮಾಯಿತ್ ಉಲೆಮಾ ಇ ಇಸ್ಲಾಂ ಫಾಜಿಲ್ (ಜೆಯುಐ-ಎಫ್)ಮುಖ್ಯಸ್ಥ ಕಿಫಾಯತುಲ್ಲಾ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಪ್ರಧಾನಿ ಸ್ಥಾನಕ್ಕೆ ಇಮ್ರಾನ್ ಖಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಪಾಕಿಸ್ತಾನದ ಪ್ರಮುಖ ವಿರೋಧ ಪಕ್ಷಗಳು ಆಗ್ರಹಿಸಿದ್ದು, ಈ ಬಗ್ಗೆ ದೇಶವ್ಯಾಪಿ ಪ್ರತಿಭಟನೆ ನಡೆಸಲು ಹನ್ನೊಂದು ವಿರೋಧ ಪಕ್ಷಗಳು ಒಟ್ಟಾಗಿ ಪಾಕಿಸ್ತಾನ ಡೆಮಾಕ್ರಟಿಕ್ ಮೂವ್‌ಮೆಂಟ್ (ಪಿಡಿಎಂ) ಮೈತ್ರಿಕೂಟವನ್ನು ಸ್ಥಾಪಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು