ನಟ ದೀಪ್ ಸಿಧು ಪತ್ತೆಗಾಗಿ ₹1 ಲಕ್ಷ ನಗದು ಪುರಸ್ಕಾರ ಘೋಷಣೆ

ನವದೆಹಲಿ: ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಟ ದೀಪ್ ಸಿಧು ಸೇರಿದಂತೆ ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಲು ಸಹಾಯ ಮಾಡಿದವರಿಗೆ ಪೊಲೀಸರು ₹1 ಲಕ್ಷ ನಗದು ಪುರಸ್ಕಾರ ಘೋಷಣೆ ಮಾಡಿದ್ದಾರೆ.
ಅಲ್ಲದೆ ಬೂಟಾ ಸಿಂಗ್, ಸುಖ್‌ದೇವ್ ಸಿಂಗ್ ಮತ್ತು ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ₹50,000 ನಗದು ಪುರಸ್ಕಾರ ಘೋಷಣೆ ಮಾಡಿದ್ದಾರೆ.
ಜನವರಿ 26 ರಂದು ನಡೆದ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿತ್ತು.
ಇದನ್ನೂ ಓದಿ: ಬೇಡಿಕೆ ಈಡೇರದಿದ್ದಲ್ಲಿ ದೇಶವ್ಯಾಪಿ 40 ಲಕ್ಷ ಟ್ರ್ಯಾಕ್ಟರ್ ರ‍್ಯಾಲಿ: ಟಿಕಾಯತ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.