ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ವಿಭಜಿಸುವ ಶಕ್ತಿಗಳ ವಿರುದ್ಧ ಮತ ಚಲಾಯಿಸಲು ರಾಹುಲ್ ಮನವಿ

Last Updated 27 ಮಾರ್ಚ್ 2021, 9:18 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಶನಿವಾರ ಆರಂಭವಾಗಿದ್ದು, ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಿಷ್ಠಗೊಳಿಸಲು ದೇಶ ವಿಭಜಿಸುವ ಶಕ್ತಿಗಳ ವಿರುದ್ಧ ಮತ ಚಲಾಯಿಸುವಂತೆ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ವಿನಂತಿ ಮಾಡಿದ್ದಾರೆ.

ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರಜಾಪ್ರಭುತ್ವವನ್ನು ಬಲಗೊಳಿಸಲು ವಿಭಜಕ ಶಕ್ತಿಗಳ ವಿರುದ್ದ ಮತ ಚಲಾಯಿಸುವಂತೆ ಕೋರಿದರು.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಪಕ್ಷವು, ಎಡರಂಗ ಮತ್ತು ಭಾರತೀಯ ಸೆಕ್ಯೂಲರ್ ಫ್ರಂಟ್ (ಐಎಸ್‌ಎಫ್) ಮೈತ್ರಿಕೂಟದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ.

294 ಸದಸ್ಯಬಲದ ಪಶ್ಚಿಮ ಬಂಗಾಳದಲ್ಲಿಒಟ್ಟು ಎಂಟು ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 29ರಂದು ಮತದಾನ ಕೊನೆಗೊಳ್ಳಲಿದ್ದು, ಮೇ 2ರಂದು ಮತಎಣಿಕೆ ನಡೆಯಲಿದೆ.

ಇನ್ನೊಂದೆಡೆ ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯುತ್ತಿದೆ.

ಅತ್ತ ಅಸ್ಸಾಂನಲ್ಲಿ ಪ್ರಚಾರದಲ್ಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯದ ಪ್ರಗತಿ ಮತ್ತು ಸುವರ್ಣದಂತಹ ಭವಿಷ್ಯಕ್ಕಾಗಿ ಮತದಾನ ಮಾಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT