ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಜಾತಿ ಪ್ರಮಾಣಪತ್ರ ಪ್ರಕರಣ: ಸಮೀರ್ ವಾಂಖೆಡೆಗೆ ಕ್ಲೀನ್‌ಚಿಟ್‌

Last Updated 13 ಆಗಸ್ಟ್ 2022, 14:49 IST
ಅಕ್ಷರ ಗಾತ್ರ

ಮುಂಬೈ: ಮಾದಕ ದ್ರವ್ಯ ನಿಯಂತ್ರಣ ದಳದ (ಎನ್‌ಸಿಬಿ) ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಅವರು ಸರ್ಕಾರಿ ನೌಕರಿ ಪಡೆಯಲು ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಈ ಕುರಿತು ತನಿಖೆ ನಡೆಸಿರುವ ಜಾತಿ ಪರಿಶೀಲನಾ ಸಮಿತಿಯು ಹೇಳಿದೆ.

ಮಹಾರಾಷ್ಟ್ರ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ಈ ಆದೇಶ ಹೊರಡಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

‘ಸಮೀರ್ ಅವರು ಹುಟ್ಟಿನಿಂದ ಮುಸ್ಲಿಂ ಅಲ್ಲ. ಅವರು ಮಹರ್‌ ಜಾತಿಗೆ ಸೇರಿದವರು. ಈ ಜಾತಿಯು ಪರಿಶಿಷ್ಟ ಜಾತಿಯಾಗಿದೆ’ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಸಮೀರ್ ಅವರುನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಎನ್‌ಸಿಪಿ ಮುಖಂಡ ನವಾಬ್‌ ಮಲಿಕ್‌ ಆರೋಪಿಸಿದ್ದರು. ರಾಜಕೀಯ ಮುಖಂಡರಾದ ಮನೋಜ್‌ ಸನ್ಸಾರೆ, ಅಶೋಕ್‌ ಕಾಂಬ್ಳೆ ಮತ್ತು ಸಂಜಯ್‌ ಕಾಂಬ್ಳೆ ಎಂಬುವವರು ಸಮೀರ್‌ ವಿರುದ್ಧ ದೂರು ಸಲ್ಲಿಸಿದ್ದರು.

ಮುಂಬೈ ಜಿಲ್ಲಾ ಜಾತಿ ಪ್ರಮಾಣಪತ್ರ ಪರಿಶೀಲನಾ ಸಮಿತಿಯು ಈ ದೂರುಗಳನ್ನು ಪರಿಶೀಲಿಸಿ ಈ ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT